ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಎಸ್.ಮಲ್ಲಿಕಾರ್ಜುನಯ್ಯ ನಿಧನಕ್ಕೆ ಸಂತಾಪ

Srinivasa Murthy VN
Updated On : 14 Mar 2014, 12:54 pm

ತಿಪಟೂರು:  ಭಾರತೀಯ ಜನತಾ ಪಕ್ಷದ ಹಿರಿಯ ಮುತ್ಸದ್ದಿಯಾಗಿದ್ದ ಎಸ್.ಮಲ್ಲಿಕಾರ್ಜುನಯ್ಯ ನಿಧನಕ್ಕೆ ತಾಲೂಕಿನಲ್ಲಿ ಅವರ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
 ಕರ್ನಾಟಕ ರಾಜ್ಯ ಜನಸಂಘದ ಅಧ್ಯಕ್ಷರಾಗಿ, 4 ಬಾರಿ ವಿಧಾನಪರಿಷತ್ ಸದಸ್ಯರಾಗಿ, 3 ಬಾರಿ ಲೋಕಸಭಾ ಸದಸ್ಯರಾಗಿ ಮತ್ತು ಲೋಕಸಭಾ ಉಪಸಭಾಪತಿಗಳಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ರಾಜಕೀಯದಲ್ಲಿ ಅಪಾರ ಅನುಭವವುಳ್ಳ ಅವರು ಮುತ್ಸದ್ದಿ ರಾಜಕಾರಣಿಯಾಗಿ, ನಿಸ್ವಾರ್ಥ ಸೇವೆ ಸಲ್ಲಿಸಿ, ಜನಾನುರಾಗಿಗಳಾಗಿ ಜಿಲ್ಲೆಯಲ್ಲಿಯೇ ಹೆಸರು ಗಳಿಸಿದ್ದರು.
ಅವರ ನಿಧನದಿಂದ ಕಲ್ಪತರು ನಾಡು ತಿಪಟೂರು ತಾಲೂಕಿಗೆ ಅಪಾರ ನಷ್ಟ ಉಂಟಾಗಿದೆ ಎಂದು ಬಿಜೆಪಿ ಮುಖಂಡ ಲೋಕೇಶ್ವರ, ಮಾಜಿ ಶಾಸಕರಾದ ಬಿ.ನಂಜಾಮರಿ, ಎಸ್.ವಿ.ಪಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜಶೇಖರ್,  ನವನಿರ್ಮಾಣ ಸಮಿತಿ ತಾ.ಅಧ್ಯಕ್ಷ ಕೆ.ಎಸ್.ಸದಾಶಿವಯ್ಯ, ತಾ.ಜೆಡಿಎಸ್ ಅಧ್ಯಕ್ಷ ಗುರುಮೂರ್ತಿ, ಪ್ರೊ.ಎಂ.ರೇಣುಕಾರ್ಯ, ಪತ್ರಕರ್ತ ಸೊಗಡು ಸೋಮಣ್ಣ, ತಾಲೂಕು ವೀರಶೈವ ಅಧ್ಯಕ್ಷ ನಿರಂಜನಮೂರ್ತಿ, ಕಾಂಗ್ರೆಸ್ ಮುಖಂಡ ದೇವಪ್ರಸಾದ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಚಿದಾನಂದ್, ಬಿಜೆಪಿ ಮುಖಂಡ ಬಿಸಲೇಹಳ್ಳಿ ಜಗದೀಶ್, ತಾ.ಬಿಜೆಪಿ ಮಾಜಿ ಅಧ್ಯಕ್ಷ ಶಿವಸ್ವಾಮಿ, ಜೆಡಿಎಸ್ ಮುಖಂಡ ಜಕ್ಕನಹಳ್ಳಿ ಲಿಂಗರಾಜು, ತಾ.ವಕೀಲರ ಸಂಘದ ಅಧ್ಯಕ್ಷ ಜಯಣ್ಣ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement