ಮತದಾನ ಜಾಗೃತಿ ಕಾರ್ಯಕ್ರಮ
ತಿಪಟೂರು: ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಮತದಾನ ಪಟ್ಟಿಯಲ್ಲಿ ತಪ್ಪದೇ ಹೆಸರನ್ನು ನೋಂದಾಯಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಹಾಕಬೇಕೆಂದು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಎಸ್.ವಿ.ಇ.ಇ.ಪಿ ವತಿಯಿಂದ ತಾಲೂಕಿನ ಎಲ್ಲಾ ಪ್ರಥಮ ದರ್ಜೆ ಕಾಲೇಜಿಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರವನ್ನು ಹಮ್ಮಿಕೊಳ್ಳಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಬಿ.ಜೆ. ಪ್ರಭುಸ್ವಾಮಿ, ಸಿ.ಎಸ್.ಕಾಂತರಾಜು, ಪ್ರಭು, ಕೋಡಾಚಾರ್, ಬಿ.ಎನ್.ಬಸವರಾಜು, ಎಸ್.ಸಿ. ಜಗದೀಶ್ ಅವರ ತಂಡ ವಿವಿಧ ಪ್ರಥಮ ದರ್ಜೆ ಕಾಲೇಜುಗಳಿಗೆ ತೆರಳಿ ಒಟ್ಟು ಸುಮಾರು 5000 ವಿದ್ಯಾರ್ಥಿಗಳಿಗೆ ಮತದಾನದ ಪಾವಿತ್ರ್ಯತೆ ಕುರಿತು ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಂತೆ 5ತಂಡಗಳಲ್ಲಿ ಬೂತ್‌ಮಟ್ಟದ ಅಧಿಕಾರಿಗಳ ಜೊತೆಯಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಲ್ಲಾಗಟ್ಟಿ ಅಡವಪ್ಪ ಪ್ರಥಮ ದರ್ಜೆ ಕಾಲೇಜು, ಕಲ್ಪತರು ವಿಜ್ಞಾನ ಪ್ರಥಮ ದರ್ಜೆ ಕಾಲೇಜು, ಕಲ್ಪತರು ಶಿಕ್ಷಣ ಮಹಾವಿದ್ಯಾಲಯ, ಉದಯ ಭಾರತಿ ಪ್ರಥಮ ದರ್ಜೆ ಕಾಲೇಜು, ಶ್ರೀ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ, ಶ್ರೀ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ಮತ್ತು ನೊಣವಿನಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.