'ಗೆದ್ದ ಜನಪ್ರತಿನಿಧಿಗಳು ಕ್ಷೇತ್ರ ಅಭಿವೃದ್ಧಿಗೆ ಆದ್ಯತೆ ನೀಡಲಿ'
ಪಾವಗಡ: ಗೆದ್ದ ಜನಪ್ರತಿನಿಧಿಗಳು ಕೇತ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ನಾಯಕ ಸಮುದಾಯದ ಅಧ್ಯಕ್ಷ ಜಯರಾಮ್ ಅಭಿಪ್ರಾಯಪಟ್ಟರು.
ಸೋಮವಾರ ಪಟ್ಟಣದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಚುನಾವಣೆಗಳಲ್ಲಿ ಗೆದ್ದ ಮೇಲೆ ಜನರನ್ನು ನಿರ್ಲಕ್ಷಿಸುತ್ತಾರೆ. ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡುತ್ತಾರೆ. ಭವಿಷ್ಯದ ದೃಷ್ಟಿಯಿಂದ ರಾಜಕಾರಣಿಗಳು ಇಂತಹ ಧೋರಣೆ ಬದಲಾಯಿಸಿಕೊಳ್ಳುವ ಅನಿವಾರ್ಯವಿದೆ. ಕಾರ್ಯಕರ್ತರನ್ನು ಕಡೆಗಾಣಿಸಿದ ಜನಪ್ರತಿನಿಧಿಗಳು ಒಂದೇ ಬಾರಿ ಮಾತ್ರ ಅವರು ಅಧಿಕಾರದಲ್ಲಿರುತ್ತಾರೆ. ನಂತರ ಚುನಾವಣೆಗಳಲ್ಲಿ ಕಾರ್ಯಕರ್ತರು ಅಂತಹವರನ್ನು ಗೆಲ್ಲಿಸುವುದಿಲ್ಲ, ಕಾರ್ಯಕರ್ತರ ಶ್ರಮದಿಂದ ಗೆದ್ದ ಜನಪ್ರತಿನಿಧಿಗಳು ಕಾರ್ಯಕರ್ತರ ಕಷ್ಟು, ನೋವಿಗೆ ಸ್ವಂದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದರು.
ಒಮ್ಮೆ ಗೆದ್ದ ಶಾಸಕರು ಅಭಿವೃದ್ಧಿ ಮತ್ತು ಕಾರ್ಯಕರ್ತರ ವಿಶ್ವಾಸ ಪಡೆಯುವ ಮೂಲಕ ಜನಪ್ರೀತಿಗೆ ಪಾತ್ರರಾಬೇಕೆಂದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದ ರಾಜ್ಯ ಜೆಡಿಎಸ್ ಪಕ್ಷ ವನ್ನು ಗೆಲ್ಲಿಸಬೇಕು. ಚಿತ್ರದುರ್ಗ ಲೋಕಸಭಾ ವ್ಯಾಪ್ತಿಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಗೂಳಿಹಟ್ಟಿ ಶೇಖರ್ ಅವರನ್ನು ಜಯಗಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಕಾರ್ಯೋನ್ಮುಖರಾಗುವಂತೆ ಮಾಡಬೇಕು ಎಂದು ಅವರು ಮನವಿ ಮಾಡಿದರು.