ಪಾವಗಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ
ಪಾವಗಡ: ಪಕ್ಷದ ಮುಖಂಡರನ್ನು ಭೇಟಿ ಮಾಡುವ ಸಲುವಾಗಿ ಪಾವಗಡಕ್ಕೆ ಆಗಮಿಸಿದ್ದೇನೆ ಎಂದು ಚಿತ್ರಗರ್ದು ಲೋಕಸಭಾ ವ್ಯಾಪ್ತಿಯ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಇಲ್ಲಿ ಹೇಳಿದರು.
ಅವರು ಪಟ್ಟಣಕ್ಕೆ ಆಗಮಿಸಿ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಪೂಜೆ ನೆರೆವೇರಿಸಿದ ನಂತರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸಮಿತಿ ಆದೇಶದ ಮೇರೆಗೆ ಇಲ್ಲಿಗೆ ಬಂದಿರುವುದಾಗಿ ಅವರು ತಿಳಿಸಿದರು. ಪಕ್ಷದ ತಾಲೂಕು ಮುಖಂಡರನ್ನು ಭೇಟಿ ಮಾಡಿ ಪ್ರಚಾರ ಕುರಿತಂತೆ ಚರ್ಚಿಸುವುದಾಗಿ ತಿಳಿಸಿದ ಅವರು ಮಾಜಿ ಸಚಿವ ವೆಂಕಟರಮಣಪ್ಪ ಮತ್ತು ಅವರ ಪುತ್ರ ಜಿಪಂ ಸದಸ್ಯ ಗ್ರಾಮಾಂತರ ಅಧ್ಯಕ್ಷ ಎಚ್.ವಿ. ವೆಂಕಟೇಶ್ ಅವರನ್ನು ಈಗಾಗಲೇ ಸಂಪರ್ಕಿಸಿದ್ದು ಮಾತುಕತೆ ನಡೆಸಲಾಗಿದೆ ಎಂದರು. ಪಕ್ಷದ ಕಚೇರಿಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರೆ ಇಲ್ಲವಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಬರುವ ಮಾಹಿತಿ ಯಾರಿಗೂ ತಿಳಿಸಿಲ್ಲ. ಅನಿವಾರ್ಯವಾಗಿ ಇಲ್ಲಿಗೆ ಆಗಮಿಸಿದ್ದೇನೆ ಎಂದರು.