ಖೋ-ಖೋ ಪಂದ್ಯ: ಕೆಐಟಿ ಪ್ರಥಮ
ತಿಪಟೂರು: ಪಟ್ಟಣದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಂಗಳೂರು ವಲಯದ ಮಹಿಳೆಯರ ಖೋ-ಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ತಿಪಟೂರು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯವು ಪಡೆದುಕೊಂಡಿದೆ.
ದ್ವಿತೀಯ ಸ್ಥಾನವನ್ನು ಬೆಂಗಳೂರಿನ ಬಿ.ಎಂ.ಎಸ್. ಎಂಜಿನಿಯರಿಂಗ್ ಕಾಲೇಜು, ತೃತೀಯ ಸ್ಥಾನವನ್ನು ಆಕ್ಸ್‌ಫರ್ಡ್ ಎಂಜಿನಿಯರಿಂಗ್ ಕಾಲೇಜು, ನಾಲ್ಕನೇ ಸ್ಥಾನವನ್ನು ತುಮಕೂರಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯವು ಪಡೆದುಕೊಂಡಿದೆ.
ವಿಜೇತ ತಂಡಗಳಿಗೆ ಕಲ್ಪತರು ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್. ಬಸವಯ್ಯ ಅಭಿನಂದನೆ ಸಲ್ಲಿಸಿದ್ದಾರೆ.