ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ಅವರೇ ಹೇಳಿದಂತೆ ಆಯ್ಕೆ ಮಾಡಲಾಗಿದೆ'

Rashmi Kasaragodu
Updated On : 24 Mar 2014, 12:35 pm

ತುಮಕೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಬಂಗಾರಪ್ಪ ಕುಟುಂಬದ ಆಯ್ಕೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಹೇಳಿದರು.
ಗೀತಾ ಅವರನ್ನು ಕಣಕ್ಕೆ ಇಳಿಸುವ ಮೂಲಕ ಜೆಡಿಎಸ್ ಡಾ.ರಾಜ್ ಕುಟುಂಬ ಒಡೆದಿದೆ ಎನ್ನುವ ಆರೋಪ ಹುರುಳಿಲ್ಲದ್ದು. ಬಂಗಾರಪ್ಪ ಅವರ ಕುಟುಂಬದವರಿಗೆ ಶಿವಮೊಗ್ಗ ಟಿಕೆಟ್ ನೀಡಬೇಕೆಂದು ಮೊದಲೇ ನಿರ್ಧರಿಸಲಾಗಿತ್ತು. ಅದರಂತೆ ನಿಮ್ಮ ಕುಟುಂಬದ ಅಭ್ಯರ್ಥಿಯನ್ನು ನೀವೆ ನಿರ್ಧರಿಸಿಕೊಳ್ಳಿ ಎಂದು ಪಕ್ಷದ ವರಿಷ್ಠರು ಸೂಚಿಸಿದ್ದರು. ಬಂಗಾರಪ್ಪ ಕುಟುಂಬದವರು ಗೀತಾ ಶಿವರಾಜ್ ಕುಮಾರ್ ಹೆಸರು ಸೂಚಿಸಿದ್ದರಿಂದ ಅವರಿಗೆ ಟಿಕೆಟ್ ಕೊಡಲಾಗಿದೆ ಅಷ್ಟೇ ಎಂದು ಕೃಷ್ಣಪ್ಪ ಹೇಳಿದರು. ಹನುಮಂತಪುರದ ಕೊಲ್ಲಾಪುರದಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪಾದಯಾತ್ರೆ ಆರಂಭಿಸುವ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದರು.  ಬೀದರ್‌ನಿಂದ ಶಾಸಕ ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಜೆಡಿಎಸ್ ಟಿಕೆಟ್ ನೀಡುವ ವಿಚಾರ ಇನ್ನೂ ತೀರ್ಮಾನವಾಗಿಲ್ಲ ಎಂದರು.
ಮೊಸಳೆ ಕಣ್ಣೀರಲ್ಲ: ರಾಮನಗರದಲ್ಲಿ ಜೆಡಿಎಸ್ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಣ್ಣೀರಿಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಜೆಡಿಎಸ್ ರಾಜ್ಯಾಧ್ಯಕ್ಷರು, ತಮಗಾದ ನೋವನ್ನು ವ್ಯಕ್ತಪಡಿಸುವಾಗ ಕಣ್ಣೀರಿನ ಮೂಲಕ ಭಾವನೆಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಂದರ್ಭದ ಮೊಸಳೆ ಕಣ್ಣೀರಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement