ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪತ್ನಿ ಕಣಕ್ಕಿಳಿಸಲು ಕೇಶವ ಚಿಂತನೆ

Rashmi Kasaragodu
Updated On : 25 Mar 2014, 1:34 am

ಕೋಲಾರ: ಜಾತಿ ಪತ್ರದ ವಿವಾದದಲ್ಲಿ ಸಿಲುಕಿರುವ ಜೆಡಿಎಸ್ ಅಭ್ಯರ್ಥಿ ಕೆ.ಕೇಶವ ಅವರು ತಮ್ಮ ಪತ್ನಿ ಹೇಮಲತಾ ಅವರನ್ನೇ ಕಣಕ್ಕಿಳಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಒಂದು ವೇಳೆ ಕೇಶವ ಅವರ ನಾಮಪತ್ರ ತಿರಸ್ಕಾರವಾದರೆ, ಬೇರೆ ಯಾರನ್ನು ಕಣಕ್ಕೆ ಇಳಿಸಬೇಕೆಂಬ ಬಗ್ಗೆಯೂ ಪಕ್ಷದ ಮಟ್ಟದಲ್ಲಿ ಚರ್ಚೆಗಳು ಸಾಗಿವೆ. ಈ ಹಿನ್ನೆಲೆಯಲ್ಲಿ ಹಿನ್ನಲೆಯಲ್ಲಿ ಕೇಶವ ಈ ಯೋಜನೆ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಅವರು ತಮ್ಮ ನಾಮಪತ್ರ ಯಾವುದೇ ಕಾರಣಕ್ಕೆ ತಿರಸ್ಕಾರಗೊಳ್ಳುವುದಿಲ್ಲ. ಎಲ್ಲಾ ದಾಖಲೆಗಳನ್ನು ನೀಡಲು ಬದ್ಧನಾಗಿದ್ದೇನೆ. ಒಂದು ವೇಳೆ ಜಾತಿ ಪತ್ರ ರದ್ದು ಆದಲ್ಲಿ ತಾನು ಸೂಚಿಸುವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ, ಗೆಲ್ಲಿಸಿಕೊಳ್ಳುವುದಕ್ಕೆ ಅವಕಾಶ ನೀಡುವಂತೆ ಕೋರುವುದಾಗಿ ತಮ್ಮ ಅಪ್ತರಲ್ಲಿ ಹೇಳಿಕೊಂಡಿದ್ದಾರೆನ್ನಲಾಗಿದೆ. ಮಾ.26ರೊಳಗೆ ಜಾತಿ ಪತ್ರದ ಸಮಸ್ಯೆ ನಿವಾರಣೆಯಾಗದಿದ್ದರೆ ಅಂದೇ ಮಧ್ಯಾಹ್ನ 3 ಗಂಟೆಯೊಳಗೆ ಪತ್ನಿ ಹೇಮಲತಾ ಅವರಿಂತ ನಾಮಪತ್ರ ಸಲ್ಲಿಸಿ, ವಿರೋಧಿಗಳ ವಿರುದ್ಧ ಮೇಲುಗೈ ಸಾಧಿಸಲು ಯತ್ನಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement