ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮತದಾನ ನಿಮ್ಮ ಹಕ್ಕು: ಜಿಲ್ಲಾಧಿಕಾರಿ ರವಿ

Rashmi Kasaragodu
Updated On : 25 Mar 2014, 1:33 am

ಕೋಲಾರ: ದೇಶಕ್ಕಾಗಿ ಪ್ರತಿಯೊಬ್ಬರು ತಮ್ಮ ಮತವನ್ನು ಚಲಾಯಿಸಿ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಿ.ಕೆ.ರವಿ ಅವರು ಹೇಳಿದರು.  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಸ್ಪೀಪ್ ಕಾರ್ಯಕ್ರಮದನ್ವಯ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ವಿವರಿಸಿದರು.  ಯಾವುದೇ ಕಾರಣಕ್ಕೂ ಮತ ಚಲಾಯಿಸದೆ ವ್ಯರ್ಥ ಮಾಡಬಾರದು. ವಿದ್ಯಾರ್ಥಿಗಳ ಜನರಿಗೆ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಬೇಕು. ಆದರೆ, ಯಾವುದೇ ಪಕ್ಷದ ಪರವಾಗಿ ಮತ ಕೋರಬಾರದು ಎಂದು ಎಚ್ಚರಿಸಿದರು. ಅಭ್ಯರ್ಥಿಗಳು ನೀತಿ ಸಂಹಿತೆ ಉಲ್ಲಂಘಿಸಿದರೆ ಅಂಥವರ ಬಗ್ಗೆ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಕ್ಷಿಪ್ರ ದಳದವರಿಗೆ ದೂರು ನೀಡಬಹುದು. 18 ವರ್ಷದ ಪ್ರತಿಯೊಬ್ಬರು ಗುರುತಿನ ಚೀಟಿ ಪಡೆದಿದ್ದು, ಮತದಾರರ ಪಟ್ಟಿಯಲ್ಲಿದ್ದರೆ ಮತ ಚಲಾಯಿಸಬಹುದು ಎಂದು ಹೇಳಿದರು. ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಮಧುಲತಾ ಮೋಸೆಸ್, ಅಪರ ಜಿಲ್ಲಾಧಿಕಾರಿ ನವೀನ್‌ಕುಮಾರ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement