ನಾಮಪತ್ರ
ಪಾವಗಡ: ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಪಾವಗಡ ತಾಲೂಕಿನ ಕೆ.ಟಿ. ಹಳ್ಳಿ ಮಂಜುನಾಥ್ ತಮ್ಮ ಬೆಂಬಲಿಗರೊಂದಿಗೆ ಚಿತ್ರದುರ್ಗಕ್ಕೆ ತೆರಳಿ ಚುನಾವಣಾ ಅಯೋಗದ ಜಿಲ್ಲಾಧಿಕಾರಿಗೆ ನಾಮ ಪತ್ರ ಸಲ್ಲಿಸಿದ್ದಾರೆ. ನಾಮ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್, ಜೆಡಿಎಸ್ನಲ್ಲಿ ಸೂಕ್ತ ಸ್ಥಾನಮಾನ ದೊರೆಯದ ಕಾರಣ ಹಿತೈಷಿಗಳ ಸಲಹೆ ಸೂಚನೆ ಪಡೆದು ಚಿತ್ರದುರ್ಗ ಲೋಕಸಭೆಗೆ ಸ್ವರ್ಧಿಸಿರುವುದಾಗಿ ತಿಳಿಸಿದರು.
ಜೆಡಿಎಸ್ ಸಮಾವೇಶ
ತುಮಕೂರು: ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ ಇದೇ ತಿಂಗಳ 26 ರಂದು ಸಂಜೆ 4 ಗಂಟೆಗೆ ನಗರ ಘಟಕದ ವತಿಯಿಂದ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ತುಮಕೂರು ಲೋಕಸಭಾ ಅಭ್ಯರ್ಥಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎ. ಕೃಷ್ಣಪ್ಪ ಮತ್ತು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಾ.ಎಂ. ಹುಲಿನಾಯ್ಕರ್ ಆಗಮಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.