ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ
ಕೊರಟಗೆರೆ: ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಎಲೇರಾಂಪುರುದ ಕುಂಚಿಟಿಗ ಮಹಾಸಂಸ್ಥಾನದ ಮಠಕ್ಕೆ ಭೇಟಿ ನೀಡಿ ಹನುಮಂತನಾಥ ಸ್ವಾಮೀಜಿ ಆಶೀರ್ವಾದ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ನನ್ನನ್ನು ಪ್ರಚಂಡ ಬಹುಮತದೊಂದಿಗೆ ಜನರು ಗೆಲ್ಲಿಸುತ್ತಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸ ಹಾಗೂ ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರ ರೂಪಿಸಿರುವಂತಹ ಹಲವಾರು ಜನಪರ ಯೋಜನೆಗಳು ಸೇರಿದಂತೆ ಕಾಂಗ್ರೆಸ್‌ಗೆ ಈ ಬಾರಿ ಜನರು ಬೆಂಬಲಿಸುತ್ತಾರೆ ಎಂದು ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಈಗಾಗಲೇ ನಾವು ಗೆದ್ದೇ ಬಿಟ್ಟಿದ್ದೇವೆ ಎನ್ನುವ ಭ್ರಮೆಯಲ್ಲಿದ್ದು ಇದು ಸಾಧ್ಯವಾಗುವುದಿಲ್ಲ ಕಾರಣ ಅವರು ಜನಪ್ರತಿನಿಧಿಗಳಾದಾಗಿನಿಂದ ಮಾಡಿರುವ ಸಾಧನೆ ಏನೆಂಬುದನ್ನು ಜನರು ಕಂಡಿದ್ದು ಈ ಚುನಾವಣೆಯಲ್ಲಿ ಅವರ ಬಂಡವಾಳ ತಿಳಿಯಲಿದೆ ಎಂದರು. ಅವರೊಂದಿಗೆ ನೂರಾರು ಜನ ಕಾರ್ಯಕರ್ತರು ಹಾಜರಿದ್ದರು.