ಅದ್ಧೂರಿ ಬ್ರಹ್ಮರಥೋತ್ಸವ
ಗುಬ್ಬಿ : ತಾಲೂಕಿನ ಚೇಳೂರು ಹೋಬಳಿಯ ಗೌರಿಪುರ ಗ್ರಾಮದ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಬುಧವಾರ ಬ್ರಹ್ಮರಥೋತ್ಸವ ಕಾರ್ಯಕ್ರಮ ವಿಧಿವತ್ತಾಗಿ ಜರುಗಿತು.
ಬೆಳಿಗ್ಗೆಯಿಂದ ನಡೆದ ಪೂಜಾ ಕೈಂಕರ್ಯಗಳಲ್ಲಿ ಗಣಪತಿ ಹೋಮ, ನವಗ್ರಹ ಹೋಮ ಸೇರಿದಂತೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬ್ರಹ್ಮರಥೋತ್ಸವ ನಡೆದ ಸಂದರ್ಭದಲ್ಲಿ ಬಾಳೆಹಣ್ಣು ದವ ಎಸೆದ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನದ ಬಿಸಿಲಲ್ಲಿ ಬಸವಳಿದ ಭಕ್ತರಿಗೆ ಪಾನಕ ಫಲಹಾರ ವ್ಯವಸ್ಥೆ ಮಾಡಲಾಗಿತ್ತು. ದಾಸೋಹ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿತ್ತು.