ಕಾಂಗ್ರೆಸ್ ನಾಯಕ ಆರೋಗ್ಯಕ್ಕೆ ಪ್ರಾರ್ಥನೆ
ವಾವಗಡ: ಅನಾರೋಗ್ಯದಿಂದ ಬಳಲುತ್ತಿರುವ ತಾಲೂಕು ಕಾಂಗ್ರೆಸ್‌ನ ಹಿರಿಯ ಮುಖಂಡ, ಜಿಪಂನ ಮಾಜಿ ಅಧ್ಯಕ್ಷ ಜಂಪಯ್ಯ ಅವರು ಬೇಗ ಗುಣಮುಖರಾಗಲಿ ಎಂದು ಅವರು ಅಭಿಮಾನಿಗಳು ಮತ್ತು ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಪ್ರಾರ್ಥಿಸಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅವರನ್ನು ವಾರದ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಅವರು ಬೇಗ ಗುಣಮುಖರಾಗಲಿ. ಅವರ ಸೇವೆ ತಾಲೂಕಿಗೆ ಅಗತ್ಯವಿದೆ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೈಲಾರರೆಡ್ಡಿ, ಸಂಘ ಸಂಸ್ಥೆಗಳ ಪ್ರತಿನಿಧಿ ಆರ್.ಟಿ.ಖಾನ್, ಸ್ಟುಡಿಯೋ ಅಮರ್ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ.