ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪ್ರತಿಭಟನೆ
ಗುಬ್ಬಿ: ಕಳೆದ 6 ತಿಂಗಳುಗಳಿಂದಲೂ ಗುಬ್ಬಿ ತಾಲೂಕಿನ ತೋಟಸಾಗರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದರೂ ಯಾವುದೇ ಅಧಿಕಾರಿಗಳು ಸೂಕ್ತ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಪಟ್ಟಣದ ಜಿಲ್ಲಾ ಪಂಚಾಯ್ತಿ ಎಂಜಿನಿಯರ್ ಕಚೇರಿ ಮುಂಭಾಗದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು.ಕುಡಿಯುವ ನೀರಿಗೆ ಅಳವಡಿಸಿದ್ದ ಪಂಪ್ ಕೆಟ್ಟು ಹೋಗಿದ್ದು ದುರಸ್ಥಿಗಾಗಿ ಪಂಪ್ ತೆಗೆದುಕೊಂಡು ಹೋಗಿ 6ತಿಂಗಳು ಕಳೆದರೂ ಹೊಸದಾಗಿ ಪಂಪ್ ಸೆಟ್ ಅಳವಡಿಸದೆ ಗ್ರಾಮದ ಸುಮಾರು 150 ಕ್ಕೂ ಹೆಚ್ಚು ಕುಟುಂಬಗಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ತ್ವರಿತವಾಗಿ ಪಂಪ್ ಅಳವಡಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಸಿದ್ದಪ್ಪ ಪ್ರತಿಭಟನಾ ನಿರತ ಗ್ರಾಮಸ್ಥರೊಂದಿಗೆ ಚರ್ಚಿಸಿದರು.