ಜೆಡಿಎಸ್ ವರಿಷ್ಠರ ಒತ್ತಡಕ್ಕೆ ಮಣಿದು ನಾಮಪತ್ರ ವಾಪಸ್
ಪಾವಗಡ: ರಾಜ್ಯ ಜೆಡಿಎಸ್ ವರಿಷ್ಠರ ಒತ್ತಡಕ್ಕೆ ಮಣಿದು ನಾಮಪತ್ರ ವಾಪಸ್ ಪಡೆದಿರುವುದಾಗಿ ಯುವ ಮುಖಂಡ ತಾಲೂಕಿನ ಕೆ.ಟಿ. ಹಳ್ಳಿ ಮಂಜುನಾಥ್ ತಿಳಿಸಿದ್ದಾರೆ.ಈ ಕುರಿತು ಮಾತನಾಡಿದ ಅವರು ಜೆಡಿಎಸ್ ಕಾರ್ಯಕರ್ತನಾದ ನಾನು ಸ್ಥಳೀಯ ರಾಜಕೀಯದಿಂದ ಏ.17ರಂದು ನಡೆಯುವ ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ವರ್ಧಿಸಲು ನಾಮ ಪತ್ರ ಸಲ್ಲಿಸಿದ್ದೆ. ರಾಜ್ಯ ಜೆಡಿಎಸ್ ಮುಖಂಡ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಹುಲಿನಾಯ್ಕರ್, ರಾಜ್ಯ ಉಪಾಧ್ಯಕ್ಷ ಎನ್.ತಿಮ್ಮಾರೆಡ್ಡಿ ಹಾಗೂ ಚಿತ್ರದುರ್ಗ ಜೆಡಿಎಸ್ ಅಭ್ಯರ್ಥಿ ಗೂಳಿಹಟ್ಟಿ ಶೇಖರ್, ಶಾಸಕ ಕೆ.ಎಂ. ತಿಮ್ಮರಾಯಪ್ಪ ಮತ್ತು ಇತರೆ ಜೆಡಿಎಸ್ ಮುಖಂಡರ ಒತ್ತಡಕ್ಕೆ ಮಣಿದು ನಾಮಪತ್ರ ವಾಪಸ್ ಪಡೆದಿರುವುದಾಗಿ ಅವರು ತಿಳಿಸಿದರು. ನಾನು ಮುಖಂಡರ ಸಲಹೆ ಮೇರೆಗೆ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ ಎಂದರು.