ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ದೇವೇಗೌಡರ ಕೈ ಬಲಪಡಿಸಲು ಜೆಡಿಎಸ್ ಬೆಂಬಲಿಸಿ'

Rashmi Kasaragodu
Updated On : 30 Mar 2014, 2:10 am

ಮಂಡ್ಯ: ರಾಷ್ಟ್ರ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಮಾಜಿ ಪ್ರಧಾನಿ ದೇವೇಗೌಡರ ಕೈ ಬಲಪಡಿಸಲು ರಾಜ್ಯದ ಜನತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸುವಂತೆ ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಡಾ.ರಮೇಶ್ ಮನವಿ ಮಾಡಿದರು. ಕೆ.ಆರ್.ಪೇಟೆ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಪರವಾಗಿ ಮತಯಾಚನೆ ಮಾಡಿದ ಅವರು, ಜನಪರ ಹೋರಾಟಗಾರರಾಗಿ, ಜನಸಾಮಾನ್ಯರ ಕೈಗೆ ಸಿಗುವ ಸಿ.ಎಸ್.ಪುಟ್ಟರಾಜು ಅವರನ್ನು ಬೆಂಬಲಿಸುವಂತೆ ಕೋರಿದರು. ಕಳೆದ ಲೋಕಸಭೆ ಉಪಚುನಾವಣೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಪುಟ್ಟರಾಜು ಪರವಾಗಿ ಜಿಲ್ಲೆಯಾದ್ಯಂತ ಅನುಕಂಪದ ಗಾಳಿ ಬೀಸುತ್ತಿರುವುದರಿಂದ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಪುಟ್ಟರಾಜು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಲೋಕಸಭೆ ಪ್ರವೇಶಿಸಿ ದಾಖಲೆ ನಿರ್ಮಿಸುತ್ತಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement