ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ರಕ್ತದಾನ ಜೀವದಾನಕ್ಕೆ ಸಮಾನ: ಅನಿತಾಲಕ್ಷ್ಮೀ

Rashmi Kasaragodu
Updated On : 30 Mar 2014, 2:10 am

ಮಧುಗಿರಿ:  ರಕ್ತದಾನ ಜೀವದಾನಕ್ಕೆ ಸಮಾನ. ರಕ್ತದಾನ ಶಿಬಿರ ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಬೆಳಸಬೇಕು ಎಂದು ಉಪವಿಭಾಗಾಧಿಕಾರಿ ಅನಿತಾಲಕ್ಷ್ಮೀ ಕರೆ ನೀಡಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯುವ ರೆಡ್ ಕ್ರಾಸ್ ಘಟಕ ಮತ್ತು ಜಿಲ್ಲಾ ರಕ್ತ ನಿಧಿ ತುಮಕೂರು  ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಕ್ತ ಗುಂಪಿನ ತಪಾಸಣಾ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಎಲ್ಲ ದಾನಕ್ಕಿಂತ ರಕ್ತದಾನ ಸರ್ವಶ್ರೇಷ್ಠ, ವಿಜ್ಞಾನ ಎಷ್ಟೇ ಮುಂದುವರಿದರೂ ಕೂಡ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ ಎಂದ ಅವರು, ಅರ್ಹ ವ್ಯಕ್ತಿಗಳೆಲ್ಲರೂ ರಕ್ತದಾನ ಮಾಡುವ ಮೂಲಕ ರೋಗಿಗಳ ಜೀವ ರಕ್ಷಣೆ ಮಾಡಬೇಕು. ಈ ಮಹತ್ತರ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಿ ಮಾನವ ಜೀವ ರಕ್ಷಿಸಲು ಸಹಕರಿಸಬೇಕು ಎಂದು ಕರೆ ನೀಡಿ ಸ್ವಯಂ ರಕ್ತದಾನ ಮಾಡಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement