ಟಿ.ವಿ. ನೋಡುವ ವಿಚಾರಕ್ಕೆ ಚಕಮಕಿ: ಕೊಲೆಯಲ್ಲಿ ಅಂತ್ಯ
ಶಿರಾ: ಕುಡಿದ ಅಮಲಿನಲ್ಲಿ ಟಿ.ವಿ. ನೋಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಒಬ್ಬನ ಹತ್ಯೆಯಲ್ಲಿ ಕೊನೆಗೊಂಡ ಘಟನೆ ನಗರದ ಸಂತೇಪೇಟೆ ಬಡಾವಣೆಯಲ್ಲಿ ನಡೆದಿದೆ.
ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಶಿವಣ್ಣ (30) ಎಂಬುವನು ಮನೆಯಲ್ಲಿದ್ದ ಲಕ್ಷ್ಮೀಕಾಂತ (38) ಎಂಬುವನ ಮೇಲೆ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದಾಗ ಗಾಯಗೊಂಡ ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ.
ಶಿರಾ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆದಿದೆ.