ಬಿಎಸ್ವೈ ಅಭಿಮಾನಿಗಳು ಜೆಡಿಎಸ್ಗೆ
ಪಾಂಡವಪುರ: ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಅವರನ್ನು ಬೆಂಬಲಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ಹಾಗೂ ಬೆಂಬಲಿಗರು ಜೆಡಿಎಸ್ ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿ ವಿಧಾನಸಭೆ ಚುನಾವಣೆ ಎದುರಿಸಿದರು. ಈಗ ತವರು ಪಕ್ಷ ಬಿಜೆಪಿ ಸೇರ್ಪಡೆಗೊಂಡರು. ಯಡಿಯೂರಪ್ಪ ಅಭಿಮಾನಿಗಳ ಸಂಘದವರನ್ನು ಸ್ಥಳೀಯ ಬಿಜೆಪಿ ಅಭ್ಯರ್ಥಿ ಬಿ.ಶಿವಲಿಂಗಯ್ಯ ಕಡೆಗಣಿಸಿ ಅವಮಾನ ಮಾಡುತ್ತಿದ್ದಾರೆ. ಆದ್ದರಿಂದ ನಾವೆಲ್ಲಾ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದೇವೆ ಎಂದು ಅಭಿಮಾನಿಗಳ ಸಂಘದ ಅಧ್ಯಕ್ಷ ಜಿತೇಂದ್ರ ಹೇಳಿದರು.