ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪ್ರಯಾಣಿಕರಿಗೆ ತೀವ್ರ ತೊಂದರೆ

Rashmi Kasaragodu
Updated On : 8 May 2014, 1:38 am

ಶಿರಾ: ರಾಜ್ಯ ಸರ್ಕಾರ ದಿಢೀರನೆ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿದ್ದರಿಂದ ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಬಿಜೆಪಿ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಬಿಜೆಪಿ ಸಂಘಟನಾ ಕಾರ್ಯದರ್ಶಿ ಮಾಲಿ ಮರಿಯಪ್ಪ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪದೇ ಪದೇ ಡೀಸಲ್ ಪೆಟ್ರೋಲ್, ಸೀಮೆಎಣ್ಣೆ, ಅಡುಗೆ ಅನಿಲ ಟೋಲ್ ಗೇಟ್ ಸುಂಕ ಶೇ.150 ರಷ್ಟು ಹೆಚ್ಚಿಸಿ ಈಗ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣ ದರವನ್ನೂ ಹೆಚ್ಚಿಸಿ ಶ್ರೀಸಾಮಾನ್ಯರಿಗೆ ಬದುಕು ಸಾಗಿಸುವುದೇ ದುಸ್ತರ ಎಂಬಂತೆ ಮಾಡಿದ್ದಾರೆ ಎಂದರು.
ರಾಜ್ಯ ಸರ್ಕಾರ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣ ದರ ಏರಿಸಿದೆ ಇದರಿಂದ ಕೂಲಿ ಕಾರ್ಮಿಕರು ಪ್ರತಿನಿತ್ಯ ದೂರದ ಗ್ರಾಮೀಣ ಪ್ರದೇಶದಿಂದ ಪಟ್ಟಣ ಪ್ರದೇಶಗಳಿಗೆ ಸಂಚರಿಸಬೇಕಾದರೆ ನೂರಾರು ರೂಪಾಯಿಗಳನ್ನು ವ್ಯಯ ಮಾಡಬೇಕಾಗಿದೆ. ಪ್ರತಿದಿನ ದುಡಿಯುವ ಹಣದಲ್ಲಿ ಪ್ರಯಾಣ ದರ ಹೆಚ್ಚಾದರೆ ಉಳಿದಂತೆ ಕುಟುಂಬದ ನಿರ್ವಹಣೆ ಹೇಗೆ ಎಂದು ಪ್ರಶ್ನಿಸಿದರು.
ಬಿಜೆಪಿ ಎಸ್ಸಿ ಘಟಕದ ಅಧ್ಯಕ್ಷ ಎನ್. ದಾಸಪ್ಪ ಮಾತನಾಡಿ ರಾಜ್ಯ ಸರ್ಕಾರ ಚುನಾವಣೆ ಆದಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣ ದರ ಏರಿಸಿರುವುದು ಸ್ವಾರ್ಥದ ರಾಜಕಾರಣವಾಗಿದೆ ಎಂದು ಆಪಾದಿಸಿದರು. ಪ್ರತಿಭಟನೆಯಲ್ಲಿ ತೆರಳಿದ ಬಿಜೆಪಿ ಕಾರ್ಯಕರ್ತರು ತಹಸೀಲ್ದಾರ್ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಕೃಷ್ಣಮೂರ್ತಿ, ಆನಂದರಾವ್, ಬಿಜೆಪಿ ಅಧ್ಯಕ್ಷ ಬಿ.ಕೆ. ಮಂಜುನಾಥ್, ಪಡೀ ರಮೇಶ್, ಸಿದ್ದಯ್ಯ ಸೇರಿದಂತೆ ಹಲವರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement