ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಧರಣಿಗೆ ತಂಪೆರೆದ ಭರಣಿ: ರೈತರಲ್ಲಿ ನಗು

Rashmi Kasaragodu
Updated On : 9 May 2014, 11:59 am

ಹೆಸರು, ಉದ್ದು, ಅಲಸಂದೆ, ತೊಗರಿ ಬೆಳೆಗಳು ಹಸಿರಿನಿಂದ ಕಂಗೊಳಿಸುತ್ತಿವೆ

ಕ.ಪ್ರ.ವಾರ್ತೆ    ತುಮಕೂರು    ಮೇ 9
ಭರಣಿ ಮಳೆಯಾಗಿ ಧರಣಿಯಲ್ಲಾ ತಂಪಾಯಿತು ಎಂಬ ಗಾಧೆ ಮಾತಿನಂತೆ ಕಳೆದೆರೆಡು ದಿನಗಳಿಂದ ಜಿಲ್ಲೆಯ ವಿವಿಧಡೆ ಬೀಳುತ್ತಿರುವ ಮಳೆಯಿಂದ ರೈತರ ಮೊಗದಲ್ಲಿ ಹರ್ಷ ಮೂಡಿದ್ದು, ಸುಡು ಬಿಸಿಲಿನ ತಾಪಕ್ಕೆ ಸೊರಗಿದ್ದ ಗಿಡ ಮರಗಳು ತಲೆಎತ್ತಿನಿಂತು ಹಸಿರಿನಿಂದ ಕಂಗೊಳಿಸುತ್ತಿದೆ.
ಏಪ್ರಿಲ್ ಕೊನೆಯವಾರದಲ್ಲಿ ಒಂದೆರಡು ದಿನ ಮಳೆಯಾಗಿದ್ದನ್ನು ಹೊರತು ಪಡಿಸಿದರೆ ಈ ವರ್ಷದಲ್ಲಿ ಕೃಷಿಗೆ ಹದವಾದ ಮಳೆ ಇತ್ತೀಚಿನ ದಿನಗಳಲ್ಲಿ ಇರಲಿಲ್ಲ. ಆದರೆ ಕಳೆದ ಎರಡು ದಿನಗಳಿಂದ ತುಂತುರು ಸಮೇತ ಜಡಿ ಮಳೆಯಾಗುತ್ತಿರುವುದು ರೈತರಲ್ಲಿ ಅದರಲ್ಲಿಯೂ ಪೂರ್ವ ಮುಂಗಾರಿನಲ್ಲಿ ಬಿತ್ತನೆ ಮಾಡಿರುವ ಚಿ.ನಾ. ಹಳ್ಳಿ, ಕುಣಿಗಲ್, ತಿಪಟೂರು,ತುರುವೇಕೆರೆ ಮತ್ತು ಗುಬ್ಬಿ ತಾಲೂಕಿನ ರೈತರಲ್ಲಿ ಹರ್ಷ ತಂದಿದೆ.
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಶೇಂಗಾ ಬಿತ್ತನೆಗೂ ರೈತರು ಸಿದ್ದತೆ ಮಾಡಿಕೊಳ್ಳಲು ಕಳೆದ ಎರಡು ದಿನಗಳಿಂದ ಬೀಳುತ್ತಿರುವ ಮಳೆಯಿಂದ ಅನುಕೂಲವಾಗಿದೆ.
ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಹುಬ್ಬಳ್ಳಿ, ಬೆಂಗಳೂರು ನಗರಗಳಲ್ಲಿ ಮಳೆಯಿಂದ ಮನೆ, ನಾಗರಿಕರ ಆಸ್ತಿ ಪಾಸ್ತಿ ಹಾನಿಯಾಗಿದ್ದರೂ ತುಮಕೂರಿನಲ್ಲಿ ಅಂತಹ ಯಾವುದೇ ಘಟನೆ ಸಂಭವಿಸಿಲ್ಲ.
ಒಟ್ಟಾರೆ ಕೆಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ನಗರದ ಜನರಲ್ಲಿ ಕೊಂಚ ನೆಮ್ಮದಿ ತಂದಿದ್ದರೆ,ರೈತರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement