ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

6 ತಿಂಗಳಿಗೊಮ್ಮೆ ಆರೋಗ್ಯ ಅದಾಲತ್

Rashmi Kasaragodu
Updated On : 13 May 2014, 2:08 am


ತುಮಕೂರು: ಜನತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ದೊರಕುವ ಆತ್ಮವಿಶ್ವಾಸ ಮೂಡಬೇಕು. ಈ ನಿಟ್ಟಿನಲ್ಲಿ ಇಲಾಖೆಯಲ್ಲಿ ಬಹಳಷ್ಟು ಯೋಜನೆ ರೂಪಿಸಲಾಗುತ್ತಿದೆ. 6 ತಿಂಗಳಿಗೊಮ್ಮೆ ಒಂದು ಜಿಲ್ಲೆಯಲ್ಲಿ ಆರೋಗ್ಯ ಅದಾಲತ್ ಬಹಿರಂಗ ಸಭೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು.  ತುಮಕೂರು ಜಿಲ್ಲೆಯಲ್ಲಿ 143 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು,37 ಕಡೆ ಮಾತ್ರ ವೈದ್ಯಾಧಿಕಾರಿಗಳ ಕೊರತೆಯಿದೆ.  ಜಿಲ್ಲೆಯಲ್ಲಿ 10 ಕಡೆ ತಾಲೂಕು ವೈದ್ಯಾಧಿಕಾರಿಗಳು ಹುದ್ದೆಯಿದ್ದು, 3 ಕಡೆ ಮಾತ್ರ ಖಾಲಿ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಪ್ರಗತಿ ಪರಿಶೀಲನೆ ವೇಳೆ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ತಾಲೂಕು ಆರೋಗ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿ ವಹಿಸಿ ಕರ್ತವ್ಯ ನಿರ್ವಹಿಸಬೇಕು, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಕ್ಷಮತೆ ಗ್ರಾಮೀಣ ಭಾಗದಲ್ಲಿ ಎದ್ದುಕಾಣಬೇಕು. ತಾಲೂಕು ಆರೋಗ್ಯಾಧಿಕಾರಿಗಳು ನಿಯಮಿತವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬೇಕು. ತಾಲೂಕು ಆರೋಗ್ಯಾಧಿಕಾರಿಗಳ ಭೇಟಿ ಕಾರ್ಯಕ್ರಮವನ್ನು ಸ್ಥಳೀಯ ಜನಪ್ರತಿನಿಧಿಗಳಿಗೆ ಮುಂಚಿತವಾಗಿ ತಿಳಿಸಿ, ಏರ್ಪಾಡು ಮಾಡುವಂತೆ ಮಾಡುವಂತೆ ಸಚಿವರು ಸೂಚಿಸಿದರು.
ಹುದ್ದೆಗಳ ವಿವರ:  ಜಿಲ್ಲೆಗೆ 182 ಡಿ ಗ್ರೂಪ್, 3 ಫಾರ್ಮಸಿಸ್ಟ್, 134 ಜೂನಿಯರ್ ಅಸಿಸ್ಟೆಂಟ್ ಗಳನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಔಷಧ ಕೊರತೆ ನೀಗಿಸಲು ಇನ್ನೆರಡು ದಿನಗಳಲ್ಲಿ ಜಿಲ್ಲೆಗೆ ಡ್ರಗ್ ಲಾಜಿಸ್ಟಿಕ್ ಮುಖ್ಯಸ್ಥರನ್ನು ಕಳುಹಿಸಿಕೊಡಲಿದ್ದು, ತಾಲೂಕು ಆರೋಗ್ಯಾಧಿಕಾರಿಗಳು ಔಷಧ ಸರಬರಾಜು ಕುರಿತಂತೆ ಶಾಸಕರೊಂದಿಗೆ ಚರ್ಚಿಸಿ, ಮಾಹಿತಿ ಸಿದ್ಧಪಡಿಸಿ ಇಟ್ಟುಕೊಳ್ಳುವಂತೆ ಸಚಿವರು ಸೂಚಿಸಿದರು.  ಡೆಂಘೀ, ಮಲೇರಿಯಾ, ಚಿಕುನ್ ಗುನ್ಯಾ ಸಾಂಕ್ರಾಮಿಕ ರೋಗಗಳು ಪತ್ತೆಯಾದ ಸ್ಥಳಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಬೇಕು. ಇಲಾಖೆಯ ವೆಬ್ಸೈಟ್ ಮಾಹಿತಿ ಆಧರಿಸಿ, ಸಮೀಪದ ಬ್ಲಡ್ ಪ್ಲೇಟ್ಲೆಟ್ಗಳು ದೊರಕುವ ಕೇಂದ್ರಗಳನ್ನು ಸಂಪರ್ಕಿಸಿ, ಉಚಿತವಾಗಿ ರೋಗ ಪೀಡಿತ ವ್ಯಕ್ತಿಗೆ ಬ್ಲಡ್ಪ್ಲೇಟ್ಲೆಟ್ಗಳು ತಲುಪಿಸುವ ವ್ಯವಸ್ಥೆಯಾಗಬೇಕು ಎಂದು ಸೂಚಿಸಿದರು.  
  ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ರು.1.25 ಕೋಟಿ  ವೆಚ್ಚದಲ್ಲಿ ನಿರ್ಮಿಸಲಾದ ಆಪರೇಷನ್ ಥಿಯೇಟರ್ ಕಾಮಗಾರಿ ಅಪೂರ್ಣಗೊಂಡಿದ್ದು, ಈ ಬಗ್ಗೆ ಮಾಹಿತಿ ಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement