ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಆದ್ಯತೆ: ಟಿಬಿಜೆ

Rashmi Kasaragodu
Updated On : 13 May 2014, 2:09 am

ಕ.ಪ್ರ.ವಾರ್ತೆ    ಶಿರಾ    ಮೇ 12
ತಾಲೂಕಿನ ಗ್ರಾಮೀಣ ಮತ್ತು ನಗರದ ಪ್ರದೇಶದಲ್ಲಿನ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಒಂದು ಪ್ರತ್ಯೇಕ ಮಹಿಳಾ ಪದವಿ ಕಾಲೇಜು ಅಗತ್ಯವಾಗಿದ್ದು ಇದರ ಬಗ್ಗೆ ಗಮನ ಹರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ ಜಯಚಂದ್ರ ತಿಳಿಸಿದರು.
ಇಲ್ಲಿನ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ  ಅವರು ಮಾತನಾಡಿದರು.
ದುಡ್ಡು ದೊಡ್ಡಪ್ಪನಾದರೆ ವಿದ್ಯೆ ಅವರಪ್ಪನಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ಪಟ್ಟು ವಿದ್ಯೆ ಕಲಿತು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಲು ಮುಂದಾಗಬೇಕೆಂದು ಕಿವಿಮಾತು ಹೇಳಿದರು.
ಪ್ರಾಂಶುಪಾಲ ಮಲ್ಲೇಶಪ್ಪ ಮಾತನಾಡಿ, ವಿದ್ಯೆಯನ್ನು ಕಷ್ಟಪಟ್ಟು ಕಲಿಯುವುದಕ್ಕಿಂತ ಇಷ್ಟಪಟ್ಟು ಕಲಿಯಲು ಮುಂದಾದಾಗ ಮಾತ್ರ ನಿಜವಾದ ಯಶಸ್ಸು ಸಾಧ್ಯ ಎಂದು ತಿಳಿಸಿದರು.
ಕಿರುತೆರೆ ನಟ ಹನುಮಂತೇಗೌಡ ಮಾತನಾಡಿದರು.  ಡಾ. ಎ.ಎಂ ಮಂಜುನಾಥ್ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.  ನಗರಸಭೆ ಅಧ್ಯಕ್ಷೆ ಜ್ಞಾನಪೂರ್ಣಮ್ಮ, ಉಪಾಧ್ಯಕ್ಷ ಅಬ್ದುಲ್ ಖಾದಿರ್, ಹನುಮಂತರಾಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


 ಲಕ್ಷ್ಮೀ ನರಸಿಂಹಸ್ವಾಮಿ ಜಯಂತಿ
ಹುಳಿಯಾರು:  ಸಮೀಪದ ಬರಗಿಹಳ್ಳಿ ಬೆಟ್ಟದ ಲಕ್ಷ್ಮೀನರಸಿಂಹಸ್ವಾಮಿ ಜಯಂತಿ ಕಾರ್ಯಕ್ರಮ ಮಂಗಳವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ನಡೆಯಲಿದೆ. ಮಂಗಳವಾರ ಬೆಳಗ್ಗೆ ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ,ಕುಂಕುಮಾರ್ಚನೆ ನಡೆಸಿ ಮಹಾಮಂಗಳಾರತಿ, ವಸಂತ ಸೇವೆ ನಂತರ  ಪ್ರಸಾದ ವಿನಿಯೋಗ ಕಾರ್ಯ ನಡೆಯಲಿದೆ. ಬುಧವಾರ ಬೆಳಗ್ಗೆ ಅಷ್ಟೋತ್ತರ, ಶತನಾಮ ಪೂಜೆ, ಮಹಾನೈವೇದ್ಯ ಕಾರ್ಯ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement