ಆಂಬ್ಯುಲೆನ್ಸ್ ಡಿಕ್ಕಿ: ಇಬ್ಬರ ಸಾವು
ನೆಲಮಂಗಲ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಬಿದರಕಲ್ಲು ಬಳಿ ನಡೆದಿದೆ. ಮೃತಪಟ್ಟವರನ್ನು ಶಿರಾ ತಾಲೂಕಿನ ತರೂರು ಗ್ರಾಮದ ಎಚ್.ವೈ.ಸಿದ್ದೇಶ್ವರ (29) ಮತ್ತು ಗೌಡಗೆರೆ ಗ್ರಾಮದ ಹನುಮಂತರಾಯಪ್ಪ (55) ಎಂದು ಗುರುತಿಸಲಾಗಿದೆ. ಇಬ್ಬರು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿಗೆ ಸಂಬಂಧಿಕರ ಮನೆಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.