ನಿಷೇಧಾಜ್ಞೆ
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ತುಮಕೂರು ವಿವಿ ಕಲಾ ಕಾಲೇಜಿನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗದಂತೆ ಮತ್ತು ಮತ ಎಣಿಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಸೂಕ್ತ ಬಂದೋಬಸ್ತ್ ಮಾಡಲಾಗುವುದು. ಈ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಧ್ಯಾಹ್ನ 1.30 ರ ವೇಳೆಗೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.