ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬಿಜೆಪಿ ವಿಜಯೋತ್ಸವ ಕರಪತ್ರ!

Rashmi Kasaragodu
Updated On : 16 May 2014, 1:29 am

ತಿಪಟೂರು: ಫಲಿತಾಂಶ ಪ್ರಕಟಕ್ಕೂ ಮುನ್ನವೇ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಪರ ವಿಜಯೋತ್ಸವ ಆಚರಣೆ ಕರಪತ್ರಗಳನ್ನು ಹಲವೆಡೆ ಈಗಾಗಲೆ ಮುದ್ರಿಸಲಾಗಿದೆ.
 ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ  ಕರಪತ್ರ ಮುದ್ರಿಸಲಾಗಿದೆ. ಇದರಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜು ಅವರಿಗೆ ಹೆಚ್ಚಿನ ಮತ ನೀಡಿ ಅವರ ಗೆಲವಿಗೆ ಪ್ರತ್ಯಕ್ಷ, ಪರೋಕ್ಷವಾಗಿ ಕಾರಣರಾದ ಪ್ರತಿಯೊಬ್ಬ ಮತದಾರರಿಗೂ ವೈಯಕ್ತಿಕ ಹಾಗೂ ವೇದಿಕೆ ವತಿಯಿಂದ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದು ತಾಲೂಕು ಬಿಜೆಪಿ ಮುಖಂಡ ಹಾಗೂ ಮೋದಿ, ಬಿ.ಎಸ್.ವೈ ಅಭಿಮಾನಿ ಬಳಗದ ಗೌರವಾಧ್ಯಕ್ಷ ರಂಗಾಪುರ ದೇವರಾಜು ಹೆಸರಲ್ಲಿ ಪ್ರಕಟಣೆ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement