ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಭರವಸೆ ನೀಡದೆ ಕೆಲಸ ಮಾಡುವೆ

Rashmi Kasaragodu
Updated On : 16 May 2014, 11:54 am

ಕ.ಪ್ರ. ವಾರ್ತೆ, ಚಿತ್ರದುರ್ಗ, ಮೇ 16
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏನು ಆಗಬೇಕೆಂಬುದು ಗೊತ್ತಿದೆ. ಅದನ್ನು ಹೇಳುವುದಿಲ್ಲ, ಮಾಡಿ ತೋರಿಸುತ್ತೇನೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಇಲ್ಲದಿದ್ದರೆ ಏನಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಸರ್ಕಾರದ ನೆರವಿನಿಂದ ಕೆಲಸ ಮಾಡಿಸಲಾಗುವುದು ಎಂದು ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ಬಿ.ಎನ್. ಚಂದ್ರಪ್ಪ ಹೇಳಿದರು.
ಸದಸ್ಯರಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಲೇ ಯಾವುದೇ ಭರವಸೆಯನ್ನು ಮತದಾರರಿಗೆ ನೀಡುವುದಿಲ್ಲ. ಚುನಾವಣೆ ಸಮಯದಲ್ಲಿಯೂ ಮತದಾರರಿಗೆ ಯಾವುದೇ ಆಶ್ವಾಸನೆ ನೀಡದೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರವಾಗಿ ಮುಗಿಸುವುದು ನನ್ನ ಗುರಿಯಾಗಿದ್ದು, ಈ ಭಾಗದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಲಾಗುವುದೆಂದು ಹೇಳಿದರು.
ನನ್ನ ಇಂದಿನ ಗೆಲವಿಗೆ ಕ್ಷೇತ್ರದ ಮತದಾರರು, ಇಬ್ಬರು ಸಚಿವರು, ಹಾಲಿ ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರ ಶ್ರಮ ಇದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement