ನಾಳೆ ಅಂಬೇಡ್ಕರ್ ಜನ್ಮ ದಿನಾಚರಣೆ
ಶಿರಾ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ . ಬಿ.ಕೃಷ್ಣಪ್ಪ ಸ್ಥಾಪಿತ) ಶಿರಾ ತಾಲೂಕು ಘಟಕದ ವತಿಯಿಂದ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಮೇ 19 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಶ್ರೀ ನಾರಾಯಣಸ್ವಾಮಿ ಕಲ್ಯಾಣಮಂಟಪ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾದ ಟೈರ್ ರಂಗನಾಥ್ ಅವರು ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಡಿ.ಎಸ್.ಎಸ್. ಸಂಚಾಲಕ ಟೈರ್ ರಂಗನಾಥ್ ವಹಿಸಲಿದ್ದು, ಪ್ರಜಾಪರಿವರ್ತನಾ ವೇದಿಕೆಯ ಬಿ. ಗೋಪಾಲ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣವನ್ನು ಸಮಾಜಸೇವಕ ಕಲ್ಕೆರೆ ರವಿಕುಮಾರ್ ನೆರವೇರಿಸಲಿದ್ದು, ಮುಖ್ಯ ಭಾಷಣಕಾರರಾಗಿ ಡಿಎಸ್‌ಎಸ್ ರಾಜ್ಯ ಸಂಚಾಲಕ ವೆಂಕಟಗಿರಿಯಯ್ಯ ಅವರು ಭಾಗವಹಿಸುವರು.