ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಶಿಕ್ಷಣದಿಂದ ಯಶಸ್ವಿ ಜೀವನ

Mainashree
Updated On : 23 May 2014, 12:05 pm

ತಿಪಟೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಜ್ಞಾನ ಪಡೆದರೆ ಮುಂದಿನ ದಿನಗಳಲ್ಲಿ ಯಶಸ್ವಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ ತಿಳಿಸಿದರು.
ಪಟ್ಟಣದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶ ಕೈಗಾರಿಕೋದ್ಯಮಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದು, ಆದರೆ ಕೈಗಾರಿಕೆ ನಡೆಸಲು ಬೇಕಾಗುವ ಶಿಕ್ಷಣ ವಿಶ್ವವಿದ್ಯಾಲಯಗಳು ನಿರೀಕ್ಷಿತ ಮಟ್ಟದಲ್ಲಿ ಕೊಡಲಾಗುತ್ತಿಲ್ಲ. ವಿದ್ಯಾರ್ಥಿಗಳು ತಮ್ಮ ಪದವಿ ಮುಗಿದ ಮೇಲೆ ಉದ್ಯೋಗಕ್ಕೆ ಸೇರುವಾಗ ಇದರ ಸಮಸ್ಯೆ ಎದುರಿಸುತ್ತಾರೆ. ಕೈಗಾರಿಕೆಗಳ ಅವಶ್ಯಕತೆ ಮತ್ತು ವಿಶ್ವವಿದ್ಯಾಲಯದ ಶೈಕ್ಷಣಿಕ ಗುಣಮಟ್ಟ ಒಂದಕ್ಕೊಂದು ಪೂರಕ ಇರದೇ ಇರುವುದರಿಂದ ಎಂಜಿನಿಯರಿಂಗ್, ಎಂಬಿಎ ಪದವಿ ಪೂರೈಸಿದ ವಿದ್ಯಾರ್ಥಿಗಳು ಉದ್ಯೋಕ್ಕಾಗಿ ಪರದಾಡುವ ಪರಿಸ್ಥಿತಿ ಬಂದಿದೆ ಎಂದರು.
ಪ್ರಾಂಶುಪಾಲ ಡಾ.ಎಸ್.ಎಂ. ಶಶಿಧರ ಅನಿಸಿಕೆಗಳನ್ನು ಹಂಚಿಕೊಂಡರು. ಪ್ರೊ. ರಾಜಕುಮಾರ್, ಟಿ.ಎಸ್. ಶಿವಪ್ರಸಾಜ್, ಟಿ.ಎಂ. ಚಂದ್ರಶೇಖರ್, ಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement