ಹಾವು ಕಚ್ಚಿ ವ್ಯಕ್ತಿ ಸಾವು
ಹಾಸನ: ಹಾವೊಂದು ವ್ಯಕ್ತಿಯೊಬ್ಬರಿಗೆ ಕಚ್ಚಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ನಗರದ ಹೊರವಲಯದ ಕಂಚಮಾರನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶ್(45) ಮೃತರು.
ಎಂದಿನಂತೆ ವೆಂಕಟೇಶ್ ತಮ್ಮ ಜಮೀನಿನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಬುಧವಾರ ಬೆಳಗ್ಗೆ 11-30ರಲ್ಲಿ ಹಾವು ಕಚ್ಚಿದೆ. ನಂತರ ಕುಟುಂಬದವರು ನಗರದ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದರಾದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 12ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ.