ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕಾಂಗ್ರೆಸ್ ಸಂಘಟನೆಗೆ ಒತ್ತು: ಪರಮೇಶ್ವರ್

Mainashree
Updated On : 23 May 2014, 10:13 am

ಕೊರಟಗೆರೆ: ಅಧಿಕಾರದ ಆಸೆಗಾಗಿ ವೈಯುಕ್ತಿಕ ಪ್ರತಿಷ್ಠೆ ತೋರುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತೇನೆ ಹೊರತು ಅಧಿಕಾರಕ್ಕಾಗಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತಿಳಿಸಿದರು.
ಅವರು ಕೊರಟಗೆರೆ ಪಟ್ಟಣದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಲೋಕಸಭಾ  ಚುನಾವಣೆಯಲ್ಲಿ ಕಾಂಗ್ರೆಸ್‌ನ ನಿಷ್ಠಾವಂತ ಅಭ್ಯರ್ಥಿ ಮುದ್ದಹನುಮೇಗೌಡರಿಗೆ ಕ್ಷೇತ್ರದಲ್ಲಿ ಹೆಚ್ಚಿನ ಮತನೀಡಿದ ಎಲ್ಲಾ ಸಮುದಾಯದ ಮತದಾರರಿಗೆ ಅಭಿನಂದಿಸಿದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷ ಕಷ್ಟದಲ್ಲಿದ್ದು ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತೇನೆ ಹೊರತು ಅಧಿಕಾರ ಕೇಳಲು ಹೋಗುವುದಿಲ್ಲ. ನನ್ನ ವೈಯಕ್ತಿಕ ಇಚ್ಛಾಶಕ್ತಿಗಾಗಿ ಅಧಿಕಾರದ ಆಸೆ ಇಲ್ಲ. ನನಗೆ ರಾಜ್ಯ ಸಂಪುಟದ ಆಡಳಿತದ ವೇಗ ಹೆಚ್ಚಿಸಲು ಅಧಿಕಾರ ನೀಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಗಿಂತಲೂ ಹೆಚ್ಚಿನ ಶೇಕಡಾವಾರು ಮತಗಳನ್ನು ಪಡೆದಿದೆ  ಎಂದು ಅಭಿಪ್ರಾಯಪಟ್ಟರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸಿ ನಂತರ ದೇಶದ ಅಭಿವೃದ್ಧಿ ಬಗ್ಗೆ ತಮ್ಮ ನಿಲುವನ್ನು ಪ್ರಕಟಿಸಿದ ನಂತರವೇ ರಾಜ್ಯದಲ್ಲಿ ಹಾಗೂ ತುಮಕೂರು ಜಿಲ್ಲೆಯಲ್ಲಿ ನೀರಾವರಿ ಸೇರಿದಂತೆ ಕೈಗಾರಿಕೆ ಮೂಲ ಸೌಕರ್ಯಗಳ ಯೋಜನೆಗಳ ಬಗ್ಗೆ ಸಲಹೆ ನೀಡುತ್ತೇನೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಕೆಲಸ ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ನಾರಾಯಣಮೂರ್ತಿ,  ಮಾಜಿ ಅಧ್ಯಕ್ಷ ಜಾಲಗಿರಿ ಕೃಷ್ಣಮೂರ್ತಿ, ಪ.ಪಂ.ಸದಸ್ಯರಾದ ಕೆ.ವಿ. ಮಂಜುನಾಥ್, ಕೆ.ಆರ್. ಓಬಳರಾಜು, ಕೆ.ಬಿ. ಲೋಕೇಶ್, ತಾ.ಪಂ.ಮಾಜಿ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಕೆಪಿಸಿಸಿ ಸದಸ್ಯ ಜಿ. ವೆಂಕಟಾಚಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾರಪ್ಪ, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಮಾಜಿ ಅದ್ಯಕ್ಷ ರಾಮಚಂದ್ರಯ್ಯ, ವಿನಯ್ ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement