ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕುಡಿಯುವ ನೀರಿಗಾಗಿ ಗ್ರಾಪಂ ಕಚೇರಿಗೆ ಮುತ್ತಿಗೆ

Mainashree
Updated On : 24 May 2014, 11:30 am

ಹುಳಿಯಾರು:  ಸಮರ್ಪಕ ಕುಡಿಯುವ ನೀರಿಗೆ ಒತ್ತಾಯಿಸಿ ಹೋಬಳಿಯ ಬೆಳ್ಳಾರದ ಮೇಗಳಗೊಲ್ಲರಹಟ್ಟಿ ಗ್ರಾಮಸ್ಥರು ಹೊಯ್ಸಳಕಟ್ಟೆ ಗ್ರಾ.ಪಂ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಶನಿವಾರ ನಡೆಯಿತು.
ಸುಮಾರು 50 ಕುಟುಂಬಗಳು ವಾಸಿಸುತ್ತಿರುವ ಗ್ರಾಮದಲ್ಲಿ ಕುಡಿಯುವ ನೀರಿಗೆ ಏಕೈಕ ಕೈಪಂಪ್ ಇದ್ದು  ಅದರಲ್ಲೂ  ಕೂಡ ಬರದ ಹಿನ್ನಲೆಯಲ್ಲಿ ಅಂತರ್ಜಲ ಕುಸಿದು ನೀರು ಆಳಕ್ಕೆ ಹೋಗಿದೆ. ನೀರಿನ ಸಮಸ್ಯೆ ಬಗ್ಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಯಾರೊಬ್ಬರೂ ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಗ್ರಾ.ಪಂ. ಕಚೇರಿಯಲ್ಲೇ ಇದ್ದ ಕಾರ್ಯದರ್ಶಿಯನ್ನು  ಘೇರಾವ್ ಮಾಡಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ  ಗ್ರಾ.ಪಂ. ಉಪಾಧ್ಯಕ್ಷ ಚಿದಾನಂದಮೂರ್ತಿ ಪ್ರತಿಕ್ರಿಯಿಸಿ ಅತೀ ಶೀಘ್ರವಾಗಿಯೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಪ್ರತಿಭಟನೆಯಲ್ಲಿ ಗ್ರಾ.ಪಂ. ಮಾಜಿ ಸದಸ್ಯ ಗೋವಿಂದರಾಜ್, ಗ್ರಾಮಸ್ಥರಾದ ಈರಯ್ಯ, ಚಿಕ್ಕಣ್ಣ, ಕುಮಾರ್, ಬಿ.ರಂಗಯ್ಯ, ಕೆ.ನಾಗರಾಜು , ನಿಂಗಣ್ಣ, ನಾಗಪ್ಪ ಸೇರಿದಂತೆ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement