ಕಾಂಗ್ರೆಸ್ ಹಿರಿಯ ಮುತ್ಸದ್ದಿ ವೈ.ಎಸ್. ಸದಾಶಿವಯ್ಯ ನಿಧನ
ಕೊರಟಗೆರೆ: ಕಾಂಗ್ರೆಸ್ ಹಿರಿಯ ಮುತ್ಸದ್ದಿ, ಹೋಟೆಲ್ ಉದ್ಯಮಿ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ವೈ.ಎಸ್.ಸದಾಶಿವಯ್ಯ(84) ಅವರು ಹೃದಯಾಫಾತದಿಂದ ಬುಧವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ ಪತ್ನಿ , ಜಿಲ್ಲಾ ಪರಿಷತ್ ಮಾಜಿ ಸದಸ್ಯೆ ಅನ್ನಪೂರ್ಣಮ್ಮ, ಒಬ್ಬ ಪುತ್ರ, ಪುತ್ರಿ ಇದ್ದಾರೆ. ಕಾಂಗ್ರೆಸ್ ಪಕ್ಷದ ಸಕ್ರಿಯ ನಿಷ್ಠಾವಂತ ಮುಖಂಡರಾಗಿದ್ದ ವೈ.ಎಸ್.ಸದಾಶಿವಯ್ಯ ಅವರು ಕೊರಟಗೆರೆ ಪುರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಪುರಸಭೆಯ ಅಧ್ಯಕ್ಷರಗಿ, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮೃತರಿಗೆ ಅಂತಿಮ ನಮನ ಸಲ್ಲಿಸಿದರು. ಮೃತರ ಪತ್ನಿ ಅನ್ನಪೂರ್ಣಮ್ಮನವರಿಗೆ ಸಾಂತ್ವನ ಹೇಳಿದರು. ಮಾಜಿ ಸಚಿವ ಸಿ.ವೀರಣ್ಣ, ಶಾಸಕ ಪಿ.ಆರ್.ಸುಧಾಕರಲಾಲ್, ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಸೊಂಪುರ ವಿಶ್ವೇಶ್ವರಯ್ಯ, ಪ.ಪಂ. ಎಲ್ಲಾ ಸದಸ್ಯರು ಮುಖ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು ಗೌರವಸಲ್ಲಿಸಿದರು. ಮೃತರ ಅಂತ್ಯಕ್ರಿಯೆಯು ಪಟ್ಟಣದ ರುದ್ರಭೂಮಿಯಲ್ಲಿ ಅಪಾರ ಜನಸ್ತೋಮದೊಂದಿಗೆ ನೆರವೇರಿತು.