ಮಠಂದೂರು ದೇವಳ ಭೇಟಿ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಗುರುವಾರ ಪುತ್ತೂರಿನ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ, ವೆಂಕ್ರಮಣ ದೇವಸ್ಥಾನ, ಮಹಮ್ಮಾಯಿ ದೇವಸ್ಥಾನ, ನಾರಾಯಣ ಗುರು ಮಂದಿರ ಮತ್ತು ಕಲ್ಲಾರೆ ರಾಘವೇಂದ್ರ ಮಠಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.