ಎಂಟೆಕ್: ಶ್ರೀದೇವಿ ಕಾಲೇಜಿಗೆ ಶೇ. 100
ಮಂಗಳೂರು: 2013ನೇ ಸಾಲಿನಲ್ಲಿ ಬೆಳಗಾವಿ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಫೆಬ್ರವರಿ ತಿಂಗಳಿನಲ್ಲಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ಕೆಂಜಾರು ಶ್ರೀ ದೇವಿ ತಾಂತ್ರಿಕ ಮಹಾವಿದ್ಯಾಲಯದ ಶೇ. 100 ಫಲಿತಾಂಶ ಪಡೆದಿದೆ. ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್‌ನಲ್ಲಿ 24 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 16 ಮಂದಿ ಅತ್ಯುತ್ತಮ ಶ್ರೇಣಿ ಹಾಗೂ 8 ಮಂದಿ ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಡಿಜಿಟಲ್ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಎಲ್ಲರೂ ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಕೆ.ಪಿ.ರಾವ್‌ಗೆ ಸನ್ಮಾನ
ಮಂಗಳೂರು: ಭಾರತೀಯ ಭಾಷಾ ಗಣಕ ಪಿತಾಮಹ ನಾಡೋಜ ಕೆ.ಪಿ. ರಾವ್ ಅವರಿಗೆ ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಏ.9ರಂದು ಬೆಳಗ್ಗೆ 10.45ಕ್ಕೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಕಿಪೀಡಿಯ ಸಂಪಾದನೆ ಬಗ್ಗೆ ಕಮ್ಮಟ ಇದೆ.