ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಬಿಜೆಪಿ ತೊರೆದು ಕೆಜೆಪಿ ಸೇರಿದ ನವೀನ್‌ಚಂದ್ರ

Lingaraj Badiger
Updated On : 19 Apr 2013, 12:41 pm

ಉಡುಪಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಮೂಲ ಬಿಜೆಪಿ ಕಾರ್ಯಕರ್ತರನ್ನು (ಬಾಬು ಹೆಗ್ಡೆ, ಕೆ. ಲಕ್ಷ್ಮೀನಾರಾಯಣ, ಸುಖಾನಂದ ಶೆಟ್ಟಿ) ಕಡೆಗಣಿಸಿ ಕಾಂಗ್ರೆಸ್ ಮೂಲದ ವ್ಯಕ್ತಿ ಸುಕುಮಾರ್ ಶೆಟ್ಟಿ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದು ನೋವು ತಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಕೆಜೆಪಿ ಪಕ್ಷ ಸೇರಿರುವುದಾಗಿ ನವೀನ್‌ಚಂದ್ರ ಉಪ್ಪುಂದ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷವು ಸಾಮಾಜಿಕ ನ್ಯಾಯಕ್ಕೆ ಬೆಲೆ ನೀಡದೆ ಯಾವುದೋ ಗುಂಪಿನ ತಾಳಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ತಾಪಂನ 5 ಸದಸ್ಯರು ಹಾಗೂ 100 ಜನ ಸಕ್ರಿಯ ಕಾರ್ಯಕರ್ತರೊಂದಿಗೆ ಕೆಜೆಪಿ ಸೇರಿರುವುದಾಗಿ ಹೇಳಿದರು.
ಕೆಜೆಪಿ ಜಿಲ್ಲಾಧ್ಯಕ್ಷ ಐ.ಬಿ. ಅಶೋಕ ಕುಮಾರ್ ಶೆಟ್ಟಿ ಮಾತನಾಡಿ, ಈಗಾಗಲೇ ಕಾರ್ಕಳದಲ್ಲಿ ಕೆಜೆಪಿಯಿಂದ ಪ್ರವೀಣ್ ಮಹಾಬಿನ್ ಅಭ್ಯರ್ಥಿಯನ್ನಾಗಿ ಆರಿಸಿದ್ದು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಬೈಂದೂರಿನಲ್ಲಿ ನವೀನ್‌ಚಂದ್ರ ಉಪ್ಪುಂದ ಅವರನ್ನು ಅಭ್ಯರ್ಥಿಯಾಗಿ ಆರಿಸಿದ್ದೇವೆ. ಕುಂದಾಪುರದಲ್ಲಿ ಮಾತ್ರ ಪಕ್ಷೇತರ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಬೆಂಬಲ ನೀಡುತ್ತೇವೆ ಎಂದರು. ಪ್ರ.ಕಾರ್ಯದರ್ಶಿ ಮಧುಕರ ಮುದ್ರಾಡಿ, ಉಪಾಧ್ಯಕ್ಷರಾದ ವಿಜಯ ಕುಮಾರ್, ಸುಭಾಷಿತ್, ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಪ್ರವೀಣ್ ಮಹಾಬಿನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement