ಬಿಜೆಪಿ ವಿರುದ್ಧ ವ್ಯಾಪಕ ಅಪಪ್ರಚಾರ: ಡೀವಿ ಆರೋಪ
ಕನ್ನಡಪ್ರಭ ವಾರ್ತೆ , ಸುಳ್ಯ , ಏ.28
ಅನಾಮಧೇಯ ಕರಪತ್ರಗಳು ಸೇರಿದಂತೆ ಬಿಜೆಪಿ ವಿರುದ್ಧ ವ್ಯಾಪಕ ಅಪಪ್ರಚಾರಗಳು ನಡೆಯುತ್ತಿವೆ. ಸಮೀಕ್ಷೆಗಳೆಲ್ಲವೂ ವಾಸ್ತವಕ್ಕೆ ವಿರುದ್ಧವಾದ ಫಲಿತಾಂಶಗಳನ್ನು ನೀಡುತ್ತಿದೆ. ಆದರೆ, ರಾಜ್ಯದಲ್ಲಿ ಆಡಳಿತ ನಡೆಸಿದ ಬಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದು, ಈ ಬಾರಿಯೂ ಜನತೆ ಆಶೀರ್ವದಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಭಾನುವಾರ ಪಕ್ಷದ ಚುನಾವಣಾ ಕಚೇರಿಗೆ ಭೇಟಿ ನೀಡಿದ ಅವರು, ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಯಾವುದೇ ಗೊಂದಲಗಳಿಲ್ಲದೆ, ನಾಯಕರ ಕಿತ್ತಾಟವಿಲ್ಲದೆ ಚುನಾವಣಾ ಪ್ರಚಾರದಲ್ಲಿ ಮುಂಚೂಣಿಯಲ್ಲಿರುವ ಬಿಜೆಪಿ ಕನಿಷ್ಠ 120-130 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮುಂದಿನ ಬಾರಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.