ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

20ರಂದು ಡಿಸಿ ಕಚೇರಿ ಎದುರು ಕಟ್ಟಡ ಕಾರ್ಮಿಕರ ಪ್ರತಿಭಟನೆ

Vishwanath S
Updated On : 5 Aug 2013, 12:24 pm

ಉಡುಪಿ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ಸರ್ಕಾರದಿಂದ ಸುಮಾರು 1440 ಕೋಟಿ ಬಿಡುಗಡೆಯಾಗಿದ್ದರೂ ಕಾರ್ಮಿಕರಿಗೆ ಕೇವಲ ರು. 22 ಕೋಟಿ  ಮೌಲ್ಯದ ಸವಲತ್ತುಗಳು ಬಿಡುಗಡೆಯಾಗಿವೆ. ಸರ್ಕಾರಿ ಅಧಿಕಾರಿಗಳ ವಿಳಂಬ ನೀತಿ ಪ್ರತಿಭಟಿಸಿ 20ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
ಇಲ್ಲಿನ ಬನ್ನಂಜೆ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ಭಾನುವಾರ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕ ಸಂಘದ 13 ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.
ಕೃಷಿ ಕ್ಷೇತ್ರದಲ್ಲಿ ಬಿಕ್ಕಟ್ಟು ಉಂಟಾಗಿರುವುದರಿಂದ ಕಟ್ಟಡ ನಿರ್ಮಾಣದತ್ತ ಜನರು ಬರುತ್ತಿದ್ದಾರೆ. ಬೆಲೆ ಏರಿಕೆ ಹಾಗೂ ವೇತನದಲ್ಲಿನ ಪೈಪೋಟಿಯಿಂದ ಕಟ್ಟಡ ಕಾರ್ಮಿಕರ ಮೇಲೆ ಪರಿಣಾಮ ಬೀರುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿಯೂ ಕಾರ್ಮಿಕರಿಗೆ ಸೇವಾ ಭದ್ರತೆ ಇಲ್ಲ ಎಂದರು.    
ಸಿಐಟಿಯು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಪ್ರತಿನಿಧಿತ್ವ ನೀಡುವುದು, ಕಾರ್ಮಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸುವುದು, ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಒದಗಿಸುವುದು ಮತ್ತಿತರರ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.
ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಉಪಾಧ್ಯಕ್ಷ ವಿಶ್ವನಾಥ ರೈ ಮಾತನಾಡಿ, ಎಡಪಕ್ಷಗಳ ವತಿಯಿಂದ ಸೆಪ್ಟೆಂಬರ್‌ನಲ್ಲಿ, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಸಾರ್ವತ್ರಿಕ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ತಿಳಿಸಿದರು.
ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕ ಸಂಘದ ಪದಾಧಿಕಾರಿಗಳಾದ ರಾಘು ದೇವಾಡಿಗ, ಗಣೇಶ ನಾಯಕ್, ಸುಂದರ ಕೋಟ್ಯಾನ್, ಗಣಪತಿ ನಾಯಕ್ ಇದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ದೋಗು ಸುವರ್ಣ ಸ್ವಾಗತಿಸಿದರು. ಉದಯ ಕುಮಾರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement