ಕರಾಟೆ: ರಾಜ್ಯಮಟ್ಟಕ್ಕೆ ಆಯ್ಕೆ
ಶಿರ್ವ: ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯ ಬಾಲಕಿಯರ ವಿಭಾಗದಲ್ಲಿ ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಮೃತಾ ಆಚಾರ್ಯ ಚಿನ್ನದ ಪದಕ ಗಳಿಸಿ, ರಾಯಚೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಮುಂಡ್ಕೂರು ಲಕ್ಷ್ಮಣ ಆಚಾರ್ಯ ಮತ್ತು ಚಿತ್ರಾಕ್ಷಿ ಆಚಾರ್ಯ ಇವರ ಪುತ್ರಿ. ಇದೇ ಸ್ಪರ್ಧೆಯ ಬಾಲಕರ ವಿಭಾಗದಲ್ಲಿ ಬೆಳ್ಮಣ್ಣು ಜೂನಿಯರ್ ಕಾಲೇಜಿನ ವಿದ್ಯಾರ್ಥಿ ಶರತ್ ಆಚಾರ್ಯ ಬೋಳ ಚಿನ್ನದ ಪದಕ ಗೆದ್ದು ರಾಯಚೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಬೋಳ ಕೃಷ್ಣಮೂರ್ತಿ ಆಚಾರ್ಯ ಮತ್ತು ಶಾರದ ಆಚಾರ್ಯರ ಪುತ್ರ.