ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

'ಭ್ರೂಣಲಿಂಗ ಪತ್ತೆ ನಿಷೇಧ ಕಾಯಿದೆ' ಕಾರ್ಯಾಗಾರ

Mainashree
Updated On : 21 Aug 2013, 10:54 am

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ತಾಲೂಕು ಆಶಾ ಕಾರ್ಯಕರ್ತೆಯರಿಗೆ 'ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯಿದೆ' ಕುರಿತು ಒಂದು ದಿನದ ಕಾರ್ಯಾಗಾರ ಮಂಗಳವಾರ ನಡೆಯಿತು.
ಉಡುಪಿ ತಾಪಂ ಅಧ್ಯಕ್ಷೆ ಗೌರಿ ಪೂಜಾರಿ ಉದ್ಘಾಟಿಸಿ, ಮಹಿಳೆಯರ ಪ್ರಾಮುಖ್ಯತೆ ಮತ್ತು ಸ್ಥಾನಮಾನ ಎತ್ತಿ ಹಿಡಿಯಲು ಸರ್ಕಾರ ಮಹಿಳಾ ಮೀಸಲಾತಿ ತಂದಿದ್ದು, ಇದನ್ನು ಸಮರ್ಥವಾಗಿ ಉಪಯೋಗಿಸಬೇಕು. ಭ್ರೂಣಲಿಂಗ ಪತ್ತೆ ಅಪರಾಧವಾಗಿದ್ದು, ಮಹಿಳೆಯರು ಇದನ್ನು ಮನಗಾಣಬೇಕು ಎಂದರು.
ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಮಾತನಾಡಿ, ಭ್ರೂಣಲಿಂಗ ಪತ್ತೆ ನಿಷೇಧ ಜಾಗೃತಿ ಕಾರ್ಯಕ್ರಮವು ಆಶಾ ಕಾರ್ಯಕರ್ತೆಯರ ಮೂಲಕ ಸಮುದಾಯಕ್ಕೆ ಮುಟ್ಟಿಸುವಂತ ಕಾರ್ಯಕ್ರಮ. ಇಂಥ ಕಾರ್ಯಕ್ರಮ ಗ್ರಾಮೀಣ ಮಟ್ಟದಲ್ಲಿ ಆಗಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ. ರಾಮಚಂದ್ರ ಬಾಯರಿ, ಲಿಂಗಾನುಪಾತದ ವ್ಯತ್ಯಾಸದಿಂದ ಆಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ.ಎ.ಸಿ. ತುಂಗಾ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಎಂ.ಜಿ. ರಾಮ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮ ರಾವ್, ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಸತ್ಯನಾರಾಯಣ ಇದ್ದರು.
24ರಂದು 'ಅಕ್ಷಯ ವಸಂತ' ಜಾದೂ
ಉಡುಪಿ: ಇಲ್ಲಿನ ಹಿರಿಯ ನಾಗರಿಕರ ಸಂಸ್ಥೆ ಮತ್ತು ಬ್ರಹ್ಮಗಿರಿಯ ಲಯನ್ಸ್ ಕ್ಲಬ್ ವತಿಯಿಂದ ಆ.24ರಂದು ಸಂಜೆ 4 ಗಂಟೆಗೆ ಬ್ರಹ್ಮಗಿರಿಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ 'ಅಕ್ಷಯ ವಸಂತ' ಜಾಗೃತಿ ಮಾಹಿತಿ ಜಾದೂ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಪ್ರೊ. ಶಂಕರ್ ಮತ್ತು ಜೂನಿಯರ್ ಶಂಕರ್ ನಡೆಸಿಕೊಡಲಿದ್ದಾರೆ. ಹಿರಿಯ ನಾಗರಿಕರು ಪಾಲ್ಗೋಳ್ಳಬೇಕೆಂದು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement