ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್
ಉಡುಪಿ: ಉಡುಪಿ ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಇಲ್ಲಿನ ಕುಂಜಿಬೆಟ್ಟಿನ ಟಿ.ಎ.ಪೈ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಇತ್ತೀಚಿಗೆ ನಡೆಯಿತು.
ಉದ್ಘಾಟನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿದ್ಯಾಂಗ ಉಪನಿರ್ದೇಶಕ ನಾಗೇಂದ್ರ ಮಧ್ಯಸ್ಥ ನೆರವೇರಿಸಿ, ಕ್ರೀಡಾಳುಗಳು ಕ್ರೀಡಾ ಮನೋಭಾವನೆಯಿಂದ ಆಟವನ್ನು ಆಡಿ ಕ್ರೀಡೆಯಲ್ಲಿ ಮುಂದೆ ಬರಬೇಕೆಂದು ಕರೆ ಇತ್ತರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಮುರಳೀಧರ್ ವಹಿಸಿದ್ದರು. ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಮಧುಕರ್, ಉಡುಪಿ ತಾಲೂಕಿನ ದೈಹಿಕ ಪರೀವಿಕ್ಷಾಣಾಧಿಕಾರಿ ಬಸವರಾಜಪ್ಪ ಉಪಸ್ಥಿತರಿದ್ದರು.
ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಎ.ವಿ. ಅತಿಥಿಗಳನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಕುಮಾರ್ ನಿರೂಪಿಸಿದರು.
ಈ ಸಂದರ್ಭದಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಧನಸಹಾಯ ಮಾಡಿದ ರಾಘು ಭಟ್ ಅವರನ್ನು ಸನ್ಮಾನಿಸಲಾಯಿತು.