ಶಾಸಕರ ಹೇಳಿಕೆ ಸತ್ಯಕ್ಕೆ ದೂರವಾದದ್ದು: ಗೋಪಾಲ ಭಂಡಾರಿ
ಕಾರ್ಕಳ: 'ಚುನಾವಣೆ ಸಂದರ್ಭ ಕೊಟ್ಟ ಭರವಸೆಯಂತೆ ಚುನಾವಣೆ ನಂತರ ತಾನು ಕಳುಹಿಸಿದ ಪ್ರಸ್ತಾವನೆಯನ್ನು ಪರಿಗಣಿಸಿ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 4 ರಸ್ತೆಗಳ ಅಭಿವೃದ್ಧಿ ಕಾಮಗಾರಿ ಮಂಜೂರಾಗಿದೆ' ಎಂದು ಶಾಸಕ ಸುನಿಲ್ ಕುಮಾರ್ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಆರೋಪಿಸಿದ್ದಾರೆ. ತಾನು ಶಾಸಕನಾಗಿದ್ದ ಅವಧಿಯಲ್ಲಿ ಕ್ಷೇತ್ರದ 10 ರಸ್ತೆಗಳನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅಭಿವೃದ್ಧಿಪಡಿಸುವಂತೆ ಲೋಕಸಭೆ ಸದಸ್ಯ ಜಯಪ್ರಕಾಶ್ ಹೆಗ್ಡೆ ಅವರಲ್ಲಿ ವಿನಂತಿ ಮಾಡಿದ್ದು, ಅವುಗಳ ಪೈಕಿ ಶಾಸಕ ಸುನಿಲ್ ಕುಮಾರ್ ಅವರು ಉಲ್ಲೇಖಿಸಿರುವ 4 ಕಾಮಗಾರಿಗಳನ್ನು ತನ್ನ ಅವಧಿಯಲ್ಲೇ ಮಂಜೂರಾತಿಗೆ ಕಳುಹಿಸಲಾಗಿದೆ. ಉಳಿದ 2ನೇ ಹಂತದ 6 ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ಕೇಂದ್ರ ಸರ್ಕಾರದ ಮುಂದಿದ್ದು, ಅನುಷ್ಠಾನಕ್ಕಾಗಿ ಲೋಕಸಭೆ ಸದಸ್ಯರು ಪ್ರಯತ್ನಿಸುತ್ತಿದ್ದಾರೆ ಎಂದು ಗೋಪಾಲ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.