ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಹಟ್ಟಿಯಂಗಡಿ ದೇವಸ್ಥಾನಕ್ಕೆ ಸಚಿವ ಕಿಮ್ಮನೆ ಭೇಟಿ

Lingaraj Badiger
Updated On : 27 Aug 2013, 12:04 pm

ಕುಂದಾಪುರ: ಮುಂದಿನ ಶೈಕ್ಷಣಿಕ ಅವಧಿಯಲ್ಲಿ ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಕಾಣದಷ್ಟು ಅಭಿವೃದ್ಧಿ ಸಾಧಿಸಲಾಗುವುದು. ಈ ಬಗ್ಗೆ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶೈಕ್ಷಣಿಕ ಮಟ್ಟದ ವರದಿ ತರಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ರತ್ನಾಕರ ಕಿಮ್ಮನೆ ಹೇಳಿದ್ದಾರೆ.
ಅವರು ಕುಂದಾಪುರದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸಂಸಾರ ಸಮೇತ ಖಾಸಗಿ ಭೇಟಿ ನೀಡಿ, ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ತಿಂಗಳೊಳಗಾಗಿ ರಾಜ್ಯದಲ್ಲಿಯೇ ಮೊದಲ ಬಾರಿಗೆ 12 ಸಾವಿರ ಶಿಕ್ಷಕರನ್ನು ತಾತ್ಕಾಲಿಕ ನೆಲೆಯಲ್ಲಿ ನಿಯೋಜಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಪ್ರತೀ ಗ್ರಾಮ ಪಂಚಾಯಿತಿ ಕ್ಷೇತ್ರದಲ್ಲಿ ಒಂದು ಶಾಲೆಯಂತೆ ರಾಜ್ಯದ 5100 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಸಾರ್ವಜನಿಕರ ಹಾಗೂ ದಾನಿಗಳ ಸಹಕಾರದೊಂದಿಗೆ ಅಭಿವೃದ್ಧಿ ಪಡಿಸಲಾಗುವುದು. ಆಯಾ ಗ್ರಾಮ ಪಂಚಾಯಿತಿಯ ನಿರ್ಣಯದಂತೆ ಆಯ್ಕೆಯಾದ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲಾಗುವುದು. ಯಾವುದೇ ದಾನಿಗಳೂ ಶಾಲೆಗೆ ಸಹಕಾರ ನೀಡಿದರೆ ಅವರ ಹೆಸರನ್ನು ಸರ್ಕಾರದ ಶಿಕ್ಷಣ ವೆಬೈಸೈಟ್‌ನಲ್ಲಿಯೂ ನಮೂದಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಸಚಿವರ ಪತ್ನಿ ಅರುಂಧತಿ, ಪುತ್ರ ಮಂಥನ್, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್, ಕಂಬದಕೋಣೆ ಸಮೂಹ ಸಂಪನ್ಮೂಲ ವ್ಯಕ್ತಿ ಜಯಾನಂದ ಪಟಗಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement