ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್

Mainashree
Updated On : 30 Aug 2013, 10:14 am

ಉಡುಪಿ: ವಿದ್ಯಾರ್ಥಿಗಳು ಹೆಚ್ಚಾಗಿ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಪ್ರತಿಭೆ ವಿಕಾಸದೊಂದಿಗೆ ಶೈಕ್ಷಣಿಕ ಬೆಳವಣಿಗೆಯೂ ಸಾಧ್ಯ ಎಂದು ನಗರಸಭೆ ಸದಸ್ಯ ಯಶ್‌ಪಾಲ್ ಸುವರ್ಣ ಹೇಳಿದರು.
ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಇತ್ತೀಚೆಗೆ ಇಲ್ಲಿನ ಅಜ್ಜರಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಸ್.ಎಸ್. ಶಿಂಧಾ ವಹಿಸಿದ್ದರು.
ಭಾರತೀಯ ಕುಟುಂಬ ಕಲ್ಯಾಣ ಯೋಜನೆ ಸಂಘದ ಅಧ್ಯಕ್ಷ ಪ್ರಕಾಶ್ ಅಂದ್ರಾದೆ, ಉಡುಪಿ ಶೈಕ್ಷಣಿಕ ಸೇವಾ ಸಮಿತಿ ಅಧ್ಯಕ್ಷ ಸದಾಶಿವ ಅಲ್ಸೆ, ಉಡುಪಿ ಕ್ರೀಡಾವಲಯ ಮೇಲ್ವಿಚಾರಕ ಶ್ರೀಧರ ಶೆಟ್ಟಿ, ಕಾಲೇಜು ಕ್ರೀಡಾ ನಿರ್ದೇಶಕ ವಿಶ್ವನಾಥ ಬಾಯರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement