ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ವಾದಿರಾಜ ಕನಕದಾಸ ಸಂಗೀತೋತ್ಸವ

Vishwanath S
Updated On : 7 Dec 2013, 11:26 am

ಉಡುಪಿ: ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿಯ ವತಿಯಿಂದ ನಡೆಯುವ 36ನೇ ವರ್ಷದ ವಾದಿರಾಜ ಕನಕದಾಸ ಸಂಗೀತೋತ್ಸವವು ಇಲ್ಲಿನ ಎಂಜಿಎಂ ಕಾಲೇಜಿನಲ್ಲಿ ಶುಕ್ರವಾರ ಆರಂಭವಾಗಿದ್ದು, 8ರವರೆಗೆ ನಡೆಯಲಿದೆ.
ಶುಕ್ರವಾರ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎನ್. ಹಾಲಾ ನಾಯ್ಕ್ ಈ ಸಂಗೀತೋತ್ಸವವನ್ನು ಉದ್ಘಾಟಿಸಿ, ಮಾನವ ಧರ್ಮಕ್ಕೆ ಧಕ್ಕೆ ಬಂದಾಗ ವಾದಿರಾಜ ಮತ್ತು ಕನಕದಾಸರು ಜಾತಿ, ಮತ, ಧರ್ಮದ ಭೇದವಿಲ್ಲದೆ ಜನಜಾಗೃತಿಯಲ್ಲಿ ತೊಡಗಿಸಿಕೊಂಡಂತಹ ಮಹಾನ್ ವ್ಯಕ್ತಿಗಳು. ಅವರ ದಾರಿಯಲ್ಲಿ ನಡೆಯುವುದಕ್ಕೆ ಪ್ರಸ್ತುತ ಯುವ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶವನ್ನು ಒದಗಿಸಿ ಕೊಡುವ ಅವಶ್ಯಕತೆಯಿದೆ. ಆಗ ಮಾತ್ರ ಮಕ್ಕಳು ಉತ್ತಮ ಕಲಾವಿದರಾಗಿ ಹೊರಹೊಮ್ಮಲು ಸಾಧ್ಯ ಎಂದರು.
ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಅಂಕುಶ್, ನಗರಸಭಾ ಸದಸ್ಯ ಶಶಿರಾಜ್ ಕುಂದರ್, ಎಂ.ಜಿ.ಎಂ. ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಹಿರಿಯ ವಿದ್ವಾಂಸ ಗೋಪಾಲ ಆಚಾರ್ಯ, ದಾನಿ ವಿಶ್ವನಾಥ ಶೆಣೈ, ಮಲ್ಪೆ ಸರ್ಕಾರಿ ಪಿ.ಯು. ಕಾಲೇಜಿನ ಪ್ರಾಂಶುಪಾಲ ಮೇಟಿ ಮುದಿಯಪ್ಪ ಇದ್ದರು.
ಉದ್ಘಾಟನಾ ಕಾರ್ಯಕ್ರಮದ ನಂತರ ಪರ್ಕಳದ ಸರಿಗಮ ಭಾರತಿ ಸಂಸ್ಥೆಯ ಪುಟಾಣಿಗಳಿಂದ ದಾಸ ಕೀರ್ತನೆ ಹಾಗೂ ಚೆನ್ನೈ ಭರತ್ ಸುಂದರ್ ಮತ್ತು ಬಳಗದವರಿಂದ ಕರ್ನಾಟಕ ಸಂಗೀತ ಕಚೇರಿಯು ನಡೆಯಿತು.
ಕಾರ್ಯಕ್ರಮಕ್ಕೆ ಮೊದಲು ಕಡಿಯಾಳಿ ದೇವಸ್ಥಾನದಿಂದ ಎಂ.ಜಿ.ಎಂ. ಕಾಲೇಜಿನವರೆಗೆ ಮೆರವಣಿಗೆಯ ಮೂಲಕ ಅತಿಥಿಗಳನ್ನು ಕರೆತರಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement