ಹಳೆ ವಿದ್ಯಾರ್ಥಿ ಸಂಘ ವಾರ್ಷಿಕೋತ್ಸವ
ಉಡುಪಿ: ಪ್ರಾಥಮಿಕ ಹಾಗೂ ಪ್ರೌಢಹಂತದಲ್ಲಿ ಶಿಕ್ಷಕರ ನಡೆನುಡಿ, ಚಾರಿತ್ರ್ಯ ವಿದ್ಯಾರ್ಥಿಗಳ ಮೇಲೆ ಬಹಳಷ್ಟು ಪ್ರಭಾವ ಬೀರುತ್ತದೆ. ಶಿಕ್ಷಕರು ಒಂದು ಮಗುವನ್ನು ಮನುಷ್ಯನಾಗಿ, ಉತ್ತಮ ನಾಗರಿಕನಾಗಿ ರೂಪಿಸುವಲ್ಲಿ ಪ್ರಧಾನ ಪಾತ್ರ ವಹಿಸುತ್ತಾರೆ ಎಂದು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ರೆ.ಫಾ.ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಹೇಳಿದರು. ಅವರು ಶನಿವಾರ ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾಸಂಸ್ಥೆಗಳ ಸಂಚಾಲಕ ರೆ.ಫಾ. ಸ್ಟ್ಯಾನಿ ತಾವ್ರೊ ಅಧ್ಯಕ್ಷತೆಯನ್ನು ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕ ದೇವೇಂದ್ರ ನಾಯಕ್, ಜಿಲ್ಲಾ ಪಂಚಾಯಿತಿ ಸದಸ್ಯೆ ಐಡಾಗಿಬ್ಬ ಡಿ' ಸೋಜ, ಶಿರ್ವ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ದೀಪಿಕಾ ಶಾಲೆಟ್ ಡಿ' ಸೋಜ, ಹಿರಿಯ ವೈದ್ಯ ಡಾ.ಎನ್.ಎಸ್. ಶೆಟ್ಟಿ ಪಾದೂರು ಮತ್ತಿತರರು ಇದ್ದರು.
ಪ್ರತಿಭಾ ಪ್ರದರ್ಶನ
ಉಡುಪಿ: ಬೆಳ್ಮಣ್ ಸಂತ ಜೋಸೆಫ್ ಪ್ರೌಢಶಾಲೆ ಸಭಾಂಗಣದಲ್ಲಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಪ್ರೌಢಶಾಲೆಯ ಸಂಚಾಲಕ ರೆ.ಫಾ. ಲಾರೆನ್ಸ್ ಬಿ. ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಸದಸ್ಯ ಸುಪ್ರೀತ್ ಶೆಟ್ಟಿ, ಬೆಳ್ಮಣ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ಕುಂದರ್, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಮೊನಿಕಾ ಇದ್ದರು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.