ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಪ್ರತಿಯೊಬ್ಬರನ್ನು ಗೌರವಿಸಿ: ನ್ಯಾ. ಅಂಗಡಿ

Mainashree
Updated On : 11 Dec 2013, 10:18 am

ಉಡುಪಿ: ಪ್ರತಿಯೊಬ್ಬರು ಸಮಾನತೆ ಮತ್ತು ಸಂರಕ್ಷಣೆ ಹೊಂದುವುದು ನಮ್ಮ ದೇಶದಲ್ಲಿ ಸಂವಿಧಾನಬದ್ಧ ಹಕ್ಕಾಗಿದೆ. ಆದರೆ ವಿಶ್ವದ ಪ್ರತಿಯೊಬ್ಬ ಮಾನವ ಜೀವಿಯನ್ನು ಗಮನದಲ್ಲಿರಿಸಿ 1948ರ ಡಿ.10ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ವಿಶ್ವ ಮಾನವ ಹಕ್ಕುಗಳ ಘೋಷಣೆಯನ್ನು ಅಂಗೀಕರಿಸಿದೆ, ಇದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಎಂ. ಅಂಗಡಿ ಹೇಳಿದರು.
ಅವರು ಮಂಗಳವಾರ ನಗರದ ಡಾ.ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುದ್ಧಬಂಧಿಗಳನ್ನು ಗೌರವಯುತವಾಗಿ ನಡೆಸುವ ಸಂಬಂಧ, ದೇಶ, ದೇಶಗಳ ನಡುವೆ ಮಾನವ ಸಂಬಂಧಗಳನ್ನು ಪಾಲಿಸಲು ಪ್ರತಿಯೊಬ್ಬ ಮಾನವನನ್ನು ಗೌರವಿಸಬೇಕೆಂಬ ಹಿನ್ನಲೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ವ್ಯಾಪಕ ಜಾಗೃತಿ ಆರಂಭವಾಯಿತು. ಕ್ರಮೇಣ ಇದು ನಮ್ಮ ಪೊಲೀಸ್ ವ್ಯವಸ್ಥೆಯಲ್ಲೂ ಉತ್ತಮ ವಾತಾವರಣ ನಿರ್ಮಾಣಕ್ಕೆ ನೆರವಾಯಿತು ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಕುಮಾರ್, ನಾವಿಂದು ಹಕ್ಕುಗಳ ಜತೆಗೆ ಕರ್ತವ್ಯವನ್ನು ಪಾಲಿಸಬೇಕಿದೆ ಎಂದು ನುಡಿದರು.
ಕಾಲೇಜಿನ ಪ್ರಾಂಶುಪಾಲೆ ಪ್ರೊ.ಸಿ. ಅಶ್ವತ್ಥಮ್ಮ ಉಪಸ್ಥಿತರಿದ್ದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್, ವಕೀಲರ ಸಂಘದ ಉಪಾಧ್ಯಕ್ಷ ಗಣೇಶ್ ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಕಿಣಿ ವೇದಿಕೆಯಲ್ಲಿದ್ದರು. ಪ್ರಾಧ್ಯಾಪಕ ಡಾ. ಕಿರಣ್ ಸ್ವಾಗತಿಸಿದರು. ಅಶೋಕ್ ಭಂಡಾರಿ ವಂದಿಸಿದರು. ಸುರೇಂದ್ರನಾಥ ಶೆಟ್ಟಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement