25ರಂದು ಚಿಂತಕ ಶ್ರೀಪತಿ ತಂತ್ರಿಗೆ ಅಭಿನಂದನೆ
ಉಡುಪಿ: ಹಿರಿಯ ಚಿಂತಕ ಪಾದೂರು ಶ್ರೀಪತಿ ತಂತ್ರಿ ಅವರಿಗೆ 75ರ ಅಭಿನಂದನಾ ಸಮಾರಂಭವು ಡಿ.25ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಎಚ್. ಕೃಷ್ಣ ಭಟ್ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಭಿನಂದನಾ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರ ವಿಶ್ರಾಂತ ಎಡ್ವೊಕೇಟ್ ಜನರಲ್ ಬಿ.ವಿ. ಆಚಾರ್, ಬೆಂಗಳೂರು ಸಂಸ್ಕೃತ ವಿವಿ ಕುಲಪತಿ ಡಾ. ಮಲ್ಲೇಪುರಂ ಜಿ. ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಮುರಲಿ ಕಡೆಕಾರ್, ಎಸ್.ವಿ. ಭಟ್, ನಾರಾಯಣ ಎಂ. ಹೆಗಡೆ ಇದ್ದರು.