ಅಕ್ಷರ ದಾಸೋಹ ಕಟ್ಟಡ ಉದ್ಘಾಟನೆ
ಉಡುಪಿ: ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲಾ ಅಕ್ಷರದಾಸೋಹ ಕಟ್ಟಡವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜಿ.ಪಂ. ಸದಸ್ಯೆ ಐಡಾಗಿಬ್ಬ ಡಿ' ಸೋಜ, ತಾ.ಪಂ. ಸದಸ್ಯ ಕೃಷ್ಣ ಪೂಜಾರಿ, ಶಿರ್ವ ಗ್ರಾ.ಪಂ. ಅಧ್ಯಕ್ಷ ಹಸನಬ್ಬ ಶೇಖ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರವಿಶಂಕರ್ ರಾವ್, ಶ್ರೀ ದೇವಳದ ಅಡಳಿತ ಮಂಡಳಿ ಅಧ್ಯಕ್ಷ ಶಶಿಧರ ವಾಗ್ಲೆ, ಆಡಳಿತ ಮೊಕ್ತೇಸರ ವಿಶ್ವನಾಥ ನಾಯಕ್, ದೇವಳದ ಅಡಳಿತ ಮಂಡಳಿಯ ಎಂ. ಬಾಲಕೃಷ್ಣ ನಾಯಕ್, ಕೆ.ವಿ. ಪ್ರಭು, ಗೀತಾ ವಾಗ್ಲೆ, ಗಂಪದಬೈಲು ಜಯರಾಮ ಪ್ರಭು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮಾಧವ ಆಚಾರ್ಯ, ರಾಜಪುರ ಸಾರಸ್ವತ ಯುವ ವೃಂದದ ಅಧ್ಯಕ್ಷ ಅನಂತರಾಮ ವಾಗ್ಲೆ, ಶಿರ್ವ ಗ್ರಾ.ಪಂ. ಸದಸ್ಯ ಕೆ.ಆರ್. ಪಾಟ್ಕರ್, ನಿವೃತ್ತ ಮುಖ್ಯ ಶಿಕ್ಷಕ ಬಿ. ಅನಂತರಾಮ ಭಟ್ ಇದ್ದರು. ಶಾಲಾ ಮುಖ್ಯ ಶಿಕ್ಷಕ ಎನ್. ರಾಧಾಕೃಷ್ಣ ಪ್ರಭು ಸ್ವಾಗತಿಸಿದರು.
ದೇವದಾಸ ಪಾಟ್ಕರ್, ಪ್ರಭಾಕರ ಜೋಗಿ ಕಾರ್ಯಕ್ರಮ ನಿರೂಪಿಸಿದರು.