ಸ್ಥಳೀಯರ ಅಭ್ಯರ್ಥಿಯಾಗಿ ಆರಿಸಲು ಕಲ್ಲೇಗ ಆಗ್ರಹ
ಪುತ್ತೂರು: ಮುಂಬರುವ ವಿಧಾನ ಸಭಾ ಚುನಾವಣೆಗೆ ಪುತ್ತೂರು ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಸ್ಥಾನಕ್ಕೆ ಸ್ಥಳೀಯರಾದ, ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕು ಎಂದು ರಾಜ್ಯ ಯುವ ಜನತಾದಳದ ಉಪಾಧ್ಯಕ್ಷ ಅಶ್ರಪ್ ಕಲ್ಲೇಗ ಆಗ್ರಹಿಸಿದ್ದಾರೆ. ಗುರುವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ದಿನೇಶ್ ಆಯ್ಕೆಯಾಗಿದ್ದಾರೆ ಎಂಬ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಆದರೆ ಪ್ರತಿ ತಾಲೂಕಿನಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಇನ್ನಷ್ಟೇ ನಡೆಸಬೇಕಿದೆ. ಅಭ್ಯರ್ಥಿ ಆಯ್ಕೆ ನಡೆದಿದೆ ಎಂಬ ವಿಚಾರದಲ್ಲಿ ಹುರುಳಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
---