ಅಪಘಾತದಲ್ಲಿ ಉಡುಪಿ ವಿದ್ಯಾರ್ಥಿ ಸಾವು
ಬೆಂಗಳೂರು: ಬೆಂಗಳೂರಿನ ಅಶೋಕನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. 24 ವರ್ಷದ ಉಡುಪಿ ಮೂಲದ ವಿನಯ್ ಭಾಗವತ್ ಮೃತಪಟ್ಟವರು. ರಿಚ್‌ಮಂಡ್ ರಸ್ತೆಯಲ್ಲಿ ಗುರುವಾರ ರಾತ್ರಿ ಅಪಘಾತ ಸಂಭವಿಸಿದೆ.ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿನಯ್ ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದೇ ಘಟನೆಗೆ ಕಾರಣ ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ವಿನಯ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಆತ್ಮಹತ್ಯೆ
ಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತರು ಚಂದ್ರಾವತಿ. ಅವರು ಮಾನಸಿಕ ಕಾಯಿಲೆಯಿಂದ ಬಳಲುತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೇ ಇದ್ದುದರಿಂದ, ಜೀವನದಲ್ಲಿ ಬೇಸತ್ತು ಗುರುವಾರ ಮನೆಯ ಮಾಳಿಗೆ ಮೇಲಿರುವ ಕೋಣೆಯಲ್ಲಿ ಫ್ಯಾನ್‌ಗೆ ಶಾಲಿನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.